ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
.ಶಿಗ್ಗಾವಿ: ಇಂದಿರಾ ಕ್ಯಾಂಟೀನ್ ಅಪೂರ್ಣ; 2 ವರ್ಷದಿಂದ ಕುಂಟುತ್ತಾ ಸಾಗಿದೆ ಕಾಮಗಾರಿ.
ಕೊಲರಯ ಪ್ರಮುಖ ಆರೋಪಿ ನಾಗರಾಜ ಸವದತ್ತಿ ಹಾಗೂ ಅಶ್ರಫ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಅವರಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳು ಊರೂರು ಸುತ್ತಿದ್ದರು. ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿಹೂಸೂರಿನಲ್ಲಿ ಆರೋಪಿಗಳು ಇರುವ ಮಾಹಿತಿ ಲಭ್ಯವಾಗಿತ್ತು. ಅದೇ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದರು. ಮಾರ್ಗಮಧ್ಯೆ ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದರು.
.ಹಾವೇರಿ | ‘ಕಾಂಗ್ರೆಸ್ ಮುಕ್ತ ಜಿಲ್ಲೆ’ಗಾಗಿ ಬಿಜೆಪಿ ಶಪಥ.
ಆರೋಪಿಗಳನ್ನು ಬೆನ್ನಟ್ಟಿದ್ದ ಪಿಎಸ್ಐಗಳಾದ ಸಂಪತ್ ಆನಿಕಿವಿ ಹಾಗೂ ಶರಣಪ್ಪ ಹಂಡ್ರಗಲ್ ಅವರು ಪಿಸ್ತೂಲ್ನಿಂದ ಗುಂಡು ಹೊಡೆದಿದ್ದಾರೆ.

'ಗುತ್ತಿಗೆದಾರ ಶಿವಾನಂದ ಹತ್ಯೆ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ಆತ್ಮರಕ್ಷಣೆಗೆಗಾಗಿ ಇಬ್ಬರ ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
.ಹಾವೇರಿ ಜಿಲ್ಲೆಯಲ್ಲಿ ಶೇ 74.43ರಷ್ಟು ಮುಂಗಾರು ಬಿತ್ತನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.