ಭಾನುವಾರ, ಜನವರಿ 26, 2020
18 °C

ಬಾಲಕನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆತನನ್ನು ಕೊಲೆ ಮಾಡಿದ ಅಪರಾಧಿ ಚಂದಾಪೂರ ತಾಂಡಾದ ಸುಭಾಸ ಬಸವಣ್ಣೆಪ್ಪ ಅಗಸಿಮನಿ ಎಂಬುವನಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ (ಪೋಕ್ಸೊ) ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ₹ 50 ಸಾವಿರ ದಂಡ ವಿಧಿಸಿದೆ.

ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2017ರ ಮೇನಲ್ಲಿ ಸುಭಾಸ ಮಟನ್ ಸಾರು ಕೊಡುವುದಾಗಿ ಬಾಲಕನನ್ನು ಮನವೊಲಿಸಿ, ಬೈಕ್‍ನಲ್ಲಿ ಅಪಹರಿಸಿಕೊಂಡು ಕೋಣನಕೆರೆ ಗ್ರಾಮದ ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಕೊಲೆ ಮಾಡಿ ಅದೇ ಕಾಡಿನಲ್ಲಿ ಬಾಲಕನ ಶವವನ್ನು ಬಚ್ಚಿಟ್ಟಿದ್ದ ಎನ್ನಲಾಗಿದೆ.

ಬಂಕಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪೋಕ್ಸೊ ವಿಶೇಷ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು