ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರದಲ್ಲಿ ರಟ್ಟೀಹಳ್ಳಿಯಲ್ಲಿ ಸಿವಿಲ್ ನ್ಯಾಯಾಲಯ ಪ್ರಾರಂಭ: ಶಾಸಕ ಯು.ಬಿ. ಬಣಕಾರ

Published 24 ಜೂನ್ 2024, 14:35 IST
Last Updated 24 ಜೂನ್ 2024, 14:35 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಪಟ್ಟಣದಲ್ಲಿ ಶೀಘ್ರದಲ್ಲಿ ಸಿವಿಲ್ ನ್ಯಾಯಾಲಯ ಪ್ರಾರಂಭಗೊಳ್ಳಲಿದ್ದು, ಸಧ್ಯ ತೋಟಗಾರಿಕೆ ಕಚೇರಿ ಕಟ್ಟಡವನ್ನು ₹30 ಲಕ್ಷಗಳಲ್ಲಿ ಕಟ್ಟಡ ದುರಸ್ತಿ ಕಾರ್ಯಮಾಡಿ ಪ್ರಾರಂಭಿಸಲಾಗುವುದು. ಈಗಾಗಲೇ ಸರ್ಕಾರದಿಂದ ಕಟ್ಟಡ ದುರಸ್ತಿ ಕಾರ್ಯಕ್ಕೆ ಹಣ ಮಂಜೂರಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತೋಟಗಾರಿಕೆ ಕಟ್ಟಡವನ್ನು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸೋಮವಾರ ಪರಿಶೀಲಿಸಿ ಬಳಿಕ ಮಾತನಾಡಿದರು.

ನೂತನ ತಾಲ್ಲೂಕು ಕೇಂದ್ರ ರಟ್ಟೀಹಳ್ಳಿ ಪಟ್ಟಣಕ್ಕೆ ನ್ಯಾಯಾಲಯದ ಅವಶ್ಯವಿದ್ದು, ಕೂಡಲೇ ಲೋಕೋಪಯೋಗಿ ಇಲಾಖೆಯಿಂದ ಕಟ್ಟಡ ದುರಸ್ತಿ ಕೈಗೊಂಡು ನ್ಯಾಯಲಯ ಪ್ರಾರಂಭಕ್ಕೆ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗುವುದು. ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಈಗಾಗಲೇ ನಿರ್ಮಾಣಗೊಂಡಿದ್ದು, ಅದಕ್ಕೆ ಸಂಪರ್ಕಕಲ್ಪಿಸುವ ರಸ್ತೆ ಕಾಮಗಾರಿ ಬಾಕಿ ಇದ್ದು, ಈಗಾಗಲೇ ಸರ್ಕಾರದಿಂದ ಸಂಪರ್ಕ ರಸ್ತೆ ನಿರ್ಮಾಣಕ್ಕೆ ₹40 ಲಕ್ಷ ಬಿಡುಗಡೆಯಾಗಿದೆ ಎಂದು ಹೇಳಿದರು.

ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ಅಗ್ನಿಶಾಮಕ ಠಾಣೆಗೆ ಕಾರ್ಯ ನಿರ್ವಹಿಸಲು 18 ಜನ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವಕೀಲ ಪಿ.ಡಿ. ಬಸನಗೌಡ್ರ, ಪರಮೇಶಪ್ಪ ಕಟ್ಟೇಕಾರ, ವೀರನಗೌಡ ಪ್ಯಾಟೀಗೌಡ್ರ, ರವೀಂದ್ರ ಮುದಿಯಪ್ಪನವರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT