ಶುಕ್ರವಾರ, ಜೂಲೈ 10, 2020
24 °C

ಹಾವೇರಿ | ಅಂತ್ಯಕ್ರಿಯೆ ನೆರವೇರಿಸಿದ ವೈದ್ಯಕೀಯ ಸಿಬ್ಬಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಬಾರದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳೇ ಅಂತ್ಯಕ್ರಿಯೆ ನೆರವೇರಿಸಿದ ಘಟನೆ ಮಂಗಳವಾರ ನಡೆದಿದೆ.

ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲ್ಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆ ಮೃತಪಟ್ಟಿದ್ದರು. ಮೃತರ ಸಂಬಂಧಿಕರಿಗೆ ಬೆಳಿಗ್ಗೆಯೇ ಜಿಲ್ಲಾಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದರು. ಆದರೆ ಕುಟುಂಬದ ಸದಸ್ಯರು ಅಂತ್ಯಕ್ರಿಯೆಗೆ ಬರಲಿಲ್ಲ.

ಮೃತರ ಸಂಬಂಧಿಕರ ಐವರಿಗೆ ಪಿಪಿಇ ಕಿಟ್ ಸೇರಿದಂತೆ ರಕ್ಷಣಾ ಸಾಮಗ್ರಿ ಒದಗಿಸುವುದಾಗಿ ಹೇಳಿದ್ದರೂ ಅಂತ್ಯಕ್ರಿಯೆಗೆ ಸಂಬಂಧಿಕರಾರೂ ಬಾರದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದಲೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು