ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನ್ನಂಗಿ ಯುವತಿಗೆ ಕೋವಿಡ್‌ ದೃಢ

ಜಿಲ್ಲೆಯಲ್ಲಿ 123ಕ್ಕೆ ಏರಿದ ಪ್ರಕರಣಗಳ ಸಂಖ್ಯೆ: ಆಸ್ಪತ್ರೆಯಿಂದ ಇಬ್ಬರ ಬಿಡುಗಡೆ
Last Updated 3 ಜುಲೈ 2020, 15:38 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಯುವತಿಗೆ ಕೋವಿಡ್–19 ದೃಢಪಟ್ಟಿದೆ. ಇಬ್ಬರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 123 ಪಾಸಿಟಿವ್ ಪ್ರಕರಣ ದೃಢಗೊಂಡಿವೆ. ಈ ಪೈಕಿ 35 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರುಮೃತಪಟ್ಟಿದ್ದು, 86 ಪ್ರಕರಣಗಳು ಸಕ್ರಿಯವಾಗಿವೆ.

ಸವಣೂರು ತಾಲ್ಲೂಕು ಮನ್ನಂಗಿ ಗ್ರಾಮದ ನಿವಾಸಿ 19 ವರ್ಷದ ಯುವತಿ (ಪಿ-123) ತಂದೆ-ತಾಯಿಯೊಂದಿಗೆ ವಾಸವಾಗಿದ್ದು, ಏಳು ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾಳೆ. ಸದರಿ ಸೋಂಕಿತ ಯುವತಿಯ ಗಂಟಲು ದ್ರವದ ಮಾದರಿಯನ್ನು ಜೂನ್ 26ರಂದು ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು.

ಜುಲೈ 2ರಂದು ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಸೋಂಕಿತೆ ನಿವಾಸದ 100 ಮೀಟರ್‌ ಪ್ರದೇಶವನ್ನು ‘ಕಂಟೈನ್‍ಮೆಂಟ್ ಜೋನ್’ ಆಗಿ ಪರಿವರ್ತಿಸಲಾಗಿದೆ ಹಾಗೂ ಮನ್ನಂಗಿ ಗ್ರಾಮವನ್ನು ‘ಬಫರ್ ಜೋನ್’ ಆಗಿ ಪರಿಗಣಿಸಲಾಗಿದೆ. ಇನ್ಸಿಡೆಂಟಲ್ ಕಮಾಂಡರ್ ಆಗಿ ಸವಣೂರು ತಾಲ್ಲೂಕು ತಹಶೀಲ್ದಾರ್‌ ಅವರನ್ನು ನೇಮಕ ಮಾಡಲಾಗಿದೆ.

ಇಬ್ಬರು ಗುಣಮುಖ- ಬಿಡುಗಡೆ:ಜೂನ್ 21ರಂದು ಸೋಂಕು ದೃಢಪಟ್ಟು ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿ ಗುಣಮುಖರಾದ ಕಾರಣ ಶುಕ್ರವಾರ ಶಿಗ್ಗಾವಿ ದೇಸಾಯಿ ಗಲ್ಲಿ ನಿವಾಸಿ 45 ವರ್ಷದ ಮಹಿಳೆ (ಪಿ-8698) ಹಾಗೂ ಸವಣೂರು ತಾಲ್ಲೂಕು ಕಾರಡಗಿ ಗ್ರಾಮದ ನಿವಾಸಿ 38 ವರ್ಷದ ಆಶಾ ಕಾರ್ಯಕರ್ತೆಯನ್ನು (ಪಿ-8700) ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT