ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ರಾತ್ರಿ ಕರ್ಫ್ಯೂ ಮುಂದುವರಿಕೆ: ಪ್ರತಿಭಟನೆ, ಧರಣಿ, ರ‍್ಯಾಲಿ ನಿಷೇಧ

ಜ.19ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿ
Last Updated 5 ಜನವರಿ 2022, 13:30 IST
ಅಕ್ಷರ ಗಾತ್ರ

ಹಾವೇರಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಜ.5ರಿಂದ ಜ.19ರವರೆಗೆ ‘ರಾತ್ರಿ ಕರ್ಫ್ಯೂ’ ಮುಂದುವರಿಸಲಾಗಿದ್ದು, ಪ್ರತಿ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವಾರಾಂತ್ಯದ ಕಫ್ರ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಜಿಲೆಯಾದ್ಯಂತ ಎಲ್ಲಾ ಕಚೇರಿಗಳು ಈ ಅವಧಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ ಐದು ದಿನಗಳು ಕಾರ್ಯನಿರ್ವಹಿಸಲಿವೆ. ವಾರಾಂತ್ಯದ ಕಫ್ರ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯಗಳನ್ನು ಪೂರೈಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು.

ರೆಸ್ಟೋರೆಂಟ್, ಕ್ಲಬ್, ಬಾರ್, ಹೋಟೆಲ್‍ಗಳಲ್ಲಿ ತಿನ್ನುವ ಸ್ಥಳಗಳಲ್ಲಿ ಆಸನ ಸಾಮರ್ಥ್ಯದ ಶೇ 50ರಷ್ಟು ಮಾತ್ರ ಅವಕಾಶವಿದ್ದು, ಈ ಸ್ಥಳಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ನೀಡುವಂತೆ ಸೂಚಿಸಲಾಗಿದೆ.

ಎಲ್ಲಾ ಸಾರ್ವಜನಿಕ ಉದ್ಯಾನಗಳು ಮುಚ್ಚಿರುತ್ತವೆ.ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‍ಗಳು ಮತ್ತು ಪ್ರಾಣಿಗಳಿಗೆ ಅವಶ್ಯವಿರುವ ಮೇವುಗಳನ್ನು ಪೂರೈಕೆಗೆ ವ್ಯವಹರಿಸುವ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಕೆಲಸ ಮಾಡಲು ಅವಕಾಶ ನೀಡಲಾಗಿದೆ.

ಬಸ್ಸು ಮತ್ತು ರೈಲು ಪ್ರಯಾಣಕ್ಕೆ ಅನುಮತಿಸಿದೆ. ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ಬಸ್ ಟರ್ಮಿನಲ್, ಬಸ್ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಚಿತ್ರಮಂದಿರ: ಶೇ 50ರಷ್ಟು ಮಂದಿಗೆ ಅವಕಾಶ

ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರಗಳು, ಆಡಿಟೋರಿಯಂ ಮತ್ತು ಇದೇ ರೀತಿಯಲ್ಲಿ ಸ್ಥಳಗಳಲ್ಲಿ ಆಸನ ಸಾಮರ್ಥ್ಯದ ಶೇ 50ರಷ್ಟು ಆಸನಗಳ ಭರ್ತಿಗೆ ಮಾತ್ರ ಅವಕಾಶವಿದೆ. ಒಳಾಂಗಣದಲ್ಲಿ ನಡೆಯುವ ಮದುವೆಗೆ 100 ಜನರಿಗೆ, ತೆರೆದ ಸ್ಥಳಗಳಲ್ಲಿ ನಡೆಯುವ ಮದುವೆಗಳಿಗೆ 200ಕ್ಕೆ ಮೀರದಂತೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ದೇವಾಲಯ, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಸೇವೆಗೆ ಅನುಮತಿ ಇರುವುದಿಲ್ಲ. ದೇವಾಲಯ ಪ್ರವೇಶಕ್ಕೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾಲ್‍ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಎಲ್ಲಾ ಇನ್ನಿತರೆ ಅಂಗಡಿಗಳು ಮತ್ತು ಸಂಸ್ಥೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲು ಅವಕಾಶವಿದೆ.

ಈಜುಕೊಳಗಳು ಮತ್ತು ಜಿಮ್‍ಗಳು ಶೇ 50ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬೇಕು. ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ಅವಕಾಶವಿದೆ. ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂ ಶೇ 50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT