ಮಂಗಳವಾರ, ಸೆಪ್ಟೆಂಬರ್ 29, 2020
27 °C
ಜಿಲ್ಲೆಯಲ್ಲಿ 204 ಮಂದಿಗೆ ಸೋಂಕು: 162 ಮಂದಿ ಗುಣಮುಖ

ಐದು ಸಾವಿರದ ಗಡಿ ದಾಟಿದ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಲ್ಲೂಕು ಪಂಚಾಯತಿ, ಪುರಸಭೆ, ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಉದ್ಯೋಗಿಗಳು ಒಳಗೊಂಡಂತೆ ಜಿಲ್ಲೆಯಲ್ಲಿ ಶನಿವಾರ 204 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 162 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಲ್ಲೂಕುವಾರು ವಿವರ: ಸವಣೂರು-4, ಬ್ಯಾಡಗಿ-16, ಹಾನಗಲ್-22, ಶಿಗ್ಗಾವಿ-31, ಹಿರೇಕೆರೂರು-38, ಹಾವೇರಿ-43, ರಾಣೆಬೆನ್ನೂರು-46 ಹಾಗೂ ಇತರೆ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣಮುಖರಾಗಿ ಹಾನಗಲ್-1, ಶಿಗ್ಗಾವಿ-10, ಬ್ಯಾಡಗಿ-16, ರಾಣೆಬೆನ್ನೂರು-44 ಹಾವೇರಿ ತಾಲ್ಲೂಕಿನ 91 ಮಂದಿ ಬಿಡುಗಡೆ ಹೊಂದಿದ್ದಾರೆ.

ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೈನ್‍ಮೆಂಟ್ ಜೋನ್ ಹಾಗೂ ಬಫರ್ ಜೋನ್ ಆಗಿ ಘೋಷಿಸಲಾಗಿದೆ. ಆಯಾ ತಾಲೂಕಾ ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್ ಕಮಾಂಡರ್ ಆಗಿ ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.