ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಜಿಲ್ಲೆಯಲ್ಲಿ 109 ಜನರಿಗೆ ಕೋವಿಡ್

Last Updated 19 ಸೆಪ್ಟೆಂಬರ್ 2020, 14:54 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕು ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಶನಿವಾರ 109 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 83 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಲೂಕುವಾರು ವಿವರದಂತೆ ಬ್ಯಾಡಗಿ-27, ಹಾನಗಲ್ -16, ಹಾವೇರಿ-19, ಹಿರೇಕೆರೂರು-16, ರಾಣೆಬೆನ್ನೂರು-19, ಸವಣೂರು-10, ಶಿಗ್ಗಾವಿ-1 ಹಾಗೂ ಇತರೆ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಗುಣಮುಖರಾಗಿ ಬ್ಯಾಡಗಿ-30, ಹಾವೇರಿ-16, ರಾಣೆಬೆನ್ನೂರು-13, ಹಿರೇಕೆರೂರು-15, ಶಿಗ್ಗಾವಿ-3, ಸವಣೂರು-5 ಹಾಗೂ ಇತರೆ ಒಬ್ಬರು ಬಿಡುಗಡೆ ಹೊಂದಿದ್ದಾರೆ.

ಮರಣ: ಹಾವೇರಿ ತಾಲ್ಲೂಕು ಗುತ್ತಲದ 62 ವರ್ಷದ ಮಹಿಳೆ ಮೃತಪಟ್ಟಿದ್ದು, ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT