ಸೋಮವಾರ, ಜೂನ್ 14, 2021
23 °C
ಜಿಲ್ಲೆಯಲ್ಲಿ 2407ಕ್ಕೆ ಏರಿಕೆಯಾದ ಪ್ರಕರಣ: 34 ಮಂದಿ ಗುಣಮುಖ

ಹಾವೇರಿ | ಶುಶ್ರೂಷಕಿ ಸೇರಿ 115 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಪೊಲೀಸ್, ಶುಶ್ರೂಷಕಿ, ಶಿಕ್ಷಣ ಇಲಾಖೆ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ 115 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 34 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ  ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2407 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇಂದಿನವರೆಗೆ 1533 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಶನಿವಾರ ಒಂದು ಸಾವು ಸೇರಿ ಒಟ್ಟಾರೆ 50 ಮಂದಿ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. 406 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿ ಹಾಗೂ 418 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್‌ ಹೆಲ್ತ್‌ ಸೆಂಟರ್, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಒಟ್ಟಾರೆ 824 ಸಕ್ರಿಯ ಪ್ರಕರಣಗಳಿವೆ.

ಶನಿವಾರ ದೃಢಗೊಂಡ ಪ್ರಕರಣಗಳಲ್ಲಿ ಸವಣೂರು-7, ಹಾನಗಲ್-8, ಬ್ಯಾಡಗಿ-9, ಶಿಗ್ಗಾವಿ-13, ಹಿರೇಕೆರೂರು-16, ಹಾವೇರಿ-26 ಹಾಗೂ ರಾಣೇಬೆನ್ನೂರು ತಾಲೂಕಿನ 36 ಮಂದಿಗೆ ಸೋಂಕು ದೃಢಪಟ್ಟಿದೆ.

ಗುಣಮುಖ: ಹಾವೇರಿ-3, ಹಾನಗಲ್ ಹಾಗೂ ಹಿರೇಕೆರೂರು ತಾಲ್ಲೂಕಿನ ತಲಾ 6, ಸವಣೂರು-9, ಶಿಗ್ಗಾವಿ ತಾಲ್ಲೂಕಿನ 10 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ‘ಕಂಟೈನ್‍ಮೆಂಟ್ ಜೋನ್’ ಹಾಗೂ ‘ಬಫರ್ ಜೋನ್’ ಆಗಿ ಘೋಷಿಸಲಾಗಿದೆ. ಆಯಾ ತಾಲ್ಲೂಕು ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್ ಕಮಾಂಡರ್ ಆಗಿ ನೇಮಿಸಲಾಗಿದೆ.

ಮರಣದ ವಿವರ: ಶಿಗ್ಗಾವಿ ತಾಲ್ಲೂಕಿನ ಹೋತನಹಳ್ಳಿ 50 ವರ್ಷದ ಪುರುಷ (ಪಿ-177257) ತೀವ್ರ ಉಸಿರಾಟದ ತೊಂದರೆಯಿಂದ ಆಗಸ್ಟ್ 2ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು