ಹಾವೇರಿ: ಜಿಲ್ಲೆಯಲ್ಲಿ 160 ಮಂದಿಗೆ ಕೋವಿಡ್

ಹಾವೇರಿ: ಆರೋಗ್ಯ ಇಲಾಖೆಯ ಕ್ವಾಲಿಟಿ ಮ್ಯಾನೇಜರ್, ಕಂದಾಯ ಇಲಾಖೆಯ ಎ.ಎಸ್.ಓ. ಹಾಗೂ ಕೆ.ಇ.ಬಿ., ಪುರಸಭೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಒಳಗೊಂಡಂತೆ ಜಿಲ್ಲೆಯಲ್ಲಿ ಗುರುವಾರ 160 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಹಾಗೂ 37 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.
ತಾಲ್ಲೂಕುವಾರು ವಿವರ
ಶಿಗ್ಗಾವಿ-32, ಬ್ಯಾಡಗಿ ಹಾಗೂ ರಾಣೆಬೆನ್ನೂರು ತಲಾ 30, ಹಾವೇರಿ-25, ಹಿರೇಕೆರೂರು-19, ಹಾನಗಲ್ ಹಾಗೂ ಸವಣೂರ ತಾಲ್ಲೂಕು ತಲಾ 10 ಹಾಗೂ ಇತರೆ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಗುಣಮುಖರಾಗಿ ಸವಣೂರು-21, ಬ್ಯಾಡಗಿ-14 ರಾಣೇಬೆನ್ನೂರ ತಾಲೂಕಿನ ಇಬ್ಬರು ಬಿಡುಗಡೆ ಹೊಂದಿದ್ದಾರೆ.
ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೈನ್‍ಮೆಂಟ್ ಜೋನ್ ಹಾಗೂ ಬಫರ್ ಜೋನ್ ಆಗಿ ಘೋಷಿಸಲಾಗಿದೆ. ಆಯಾ ತಾಲ್ಲೂಕು ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್ ಕಮಾಂಡರ್ ಆಗಿ ನೇಮಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.