ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಪರೀಕ್ಷೆ ರದ್ದುಪಡಿಸಲು ಆಗ್ರಹ

Last Updated 8 ಜುಲೈ 2020, 14:27 IST
ಅಕ್ಷರ ಗಾತ್ರ

ಹಾವೇರಿ: ಪೋಷಕರಿಂದ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಕಾರ್ಯಕರ್ತರು ತಹಶೀಲ್ದಾರ್‌ ಶಂಕರ ಜಿ.ಎಸ್. ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ, ಕಾನೂನು ಹಾಗೂ ಎಲ್ಲಾ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಪಡಿಸಬೇಕು. ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಆರು ತಿಂಗಳ ಕಾಲ ಮನ್ನಾ ಮಾಡಬೇಕು. ಆನ್‌ಲೈನ್‌ ಶಿಕ್ಷಣ ಕಡ್ಡಾಯ ಸರಿಯಾದ ಕ್ರಮವಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿನ 12 ತರಗತಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಪ್ರತಿ ತಿಂಗಳು 10 ಕೆ.ಜಿ. ಅಕ್ಕಿ ಹಾಗೂ ಅಗತ್ಯ ಆಹಾರ ಪದಾರ್ಥಗಳನ್ನು 6 ತಿಂಗಳು ವಿದ್ಯಾರ್ಥಿಗಳ ಮನೆಗೆ ತಲುಪಿಸಬೇಕು. ವೈದ್ಯಕೀಯ ವಿದ್ಯಾರ್ಥಿಗಳಿಗೆ 16 ತಿಂಗಳಿಂದ ಬಾಕಿ ಉಳಿಸಿರುವ ಶಿಷ್ಯವೇತನ ಕೂಡಲೇ ಬಿಡುಗಡೆಗೊಳಿಸಿ, ಫೆಲೋಶಿಪ್, ಸ್ಕಾಲರ್‌ಶಿಪ್‌, ಶೈಕ್ಷಣಿಕ ಆರ್ಥಿಕ ನೆರವು ನೀಡಬೇಕು.ಲಾಕ್‍ಡೌನ್ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗಳ ಕುಟುಂಬ ನಿರ್ವಹಣೆಗಾಗಿ ಆರು ತಿಂಗಳ ಕಾಲ ₹7.500 ನೀಡಬೇಕು.ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು, ಉಪನ್ಯಾಸಕರು ಹಾಗೂ ಕಾರ್ಮಿಕರಿಗೆ ಬಾಕಿ ಸಂಬಳ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಎಸ್‍ಎಫ್‍ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಪ್ರಸನ್ನ ಕಡಕೋಳ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT