ಗುರುವಾರ , ಅಕ್ಟೋಬರ್ 1, 2020
21 °C

ಕೋವಿಡ್ ನಿಯಂತ್ರಿಸಲು ತಂಡ ರಚಿಸಿ: ಮನೋಜ್ ಜೈನ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಚುನಾವಣೆ ಹಾಗೂ ವಿಪತ್ತು ನಿರ್ವಹಣೆ ಮಾದರಿಯಲ್ಲಿ ಕೋವಿಡ್ ವೈರಾಣು ವೇಗವಾಗಿ ಹರಡುವುದನ್ನು ತಡೆಯಲು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಂತದಲ್ಲಿ ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಹಾಗೂ ತಹಶೀಲ್ದಾರ್‌ಗಳಿಗೆ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಣ ಕುರಿತಂತೆ ಆರೋಗ್ಯ ಇಲಾಖೆ ಹಾಗೂ ತಹಶೀಲ್ದಾರಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ತಂಡಗಳನ್ನು ರಚನೆ ಮಾಡಿಕೊಂಡು ಮನೆ– ಮನೆಗೆ ತೆರಳಿ ಎರಡನೇ ಸುತ್ತಿನ ಆರೋಗ್ಯ ಸಮೀಕ್ಷೆ ಆರಂಭಿಸಬೇಕು. ಶನಿವಾರದಿಂದ ಸರ್ವೆ ಕಾರ್ಯ ಆರಂಭಿಸಬೇಕು, ಆ.15ರೊಳಗಾಗಿ ಸರ್ವೆ ಪೂರ್ಣಗೊಳಿಸಬೇಕು. ಆಗಸ್ಟ್ ಕೊನೆಯ ವೇಳೆಗೆ ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿರುವ ಹಾವೇರಿ, ರಾಣೆಬೆನ್ನೂರು ಹಾಗೂ ಹಿರೇಕೆರೂರು ತಾಲ್ಲೂಕುಗಳಲ್ಲಿ ಹೆಚ್ಚುವರಿ ತಂಡ ರಚನೆ ಮಾಡಿ, ಪ್ರಕರಣಗಳು ಹೆಚ್ಚು ಇರುವ ಪ್ರದೇಶಗಳಲ್ಲಿ ಆದ್ಯತೆ ಮೇಲೆ ಸಮೀಕ್ಷೆ, ಪರೀಕ್ಷೆ, ಚಿಕಿತ್ಸೆ, ಸಂಪರ್ಕ ಪತ್ತೆ, ಸಂಪರ್ಕ ಕಡಿತದಂತಹ ಕಾರ್ಯಗಳನ್ನು ಕ್ಷಿಪ್ರ್ರಗತಿಯಲ್ಲಿ ಕೈಗೊಂಡು ಪರಿಣಾಮಕಾರಿಯಾಗಿ ಸೋಂಕು ತಡೆಗೆ ಕ್ರಮವಾಗಬೇಕು ಎಂದು ಸೂಚಿಸಿದರು.

ಆಶಾ, ಅಂಗನವಾಡಿ, ಕಿರಿಯ ಆರೋಗ್ಯ ಸಹಾಯಕರು, ಶಿಕ್ಷಕರು ಸೇರಿದಂತೆ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿಯನ್ನು ಬಳಸಿಕೊಂಡು ಸಮೀಕ್ಷಾ ತಂಡ ರಚಿಸಿ ತರಬೇತಿ ನೀಡಬೇಕು. ಪಾಸಿಟಿವ್ ವ್ಯಕ್ತಿಗಳ ಆಸ್ಪತ್ರೆಗೆ ಸ್ಥಳಾಂತರಕ್ಕೆ ಅಗತ್ಯವಾದ ಆಂಬುಲೆನ್ಸ್‌ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊರತೆಯಾದರೆ ಖಾಸಗಿ ಆಂಬುಲೆನ್ಸ್‌ ಪಡೆಯಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು