ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೆರೆ’ ಅವ್ಯವಹಾರ: ಕ್ರಿಮಿನಲ್‌ ಪ್ರಕರಣ ದಾಖಲು

Last Updated 18 ಫೆಬ್ರುವರಿ 2020, 9:28 IST
ಅಕ್ಷರ ಗಾತ್ರ

ಹಾವೇರಿ: ‘ನೆರೆ ಪರಿಹಾರ ವಿತರಣೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಸವಣೂರು ಮತ್ತು ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ತಿಳಿಸಿದರು.

ನೆರೆ ಪರಿಹಾರ ಫಲಾನುಭವಿ ಆಯ್ಕೆ ಮತ್ತು ಪರಿಹಾರ ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಮತ್ತು ತಹಶೀಲ್ದಾರ್‌ ವಿರುದ್ಧ ದೂರು ನೀಡಲಾಗಿದೆ. ಕಂದಾಯ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ, ವರದಿ ಸಲ್ಲಿಸಿದ್ದಾರೆ. ವರದಿಯನ್ನು ಕೂಲಂಕಷವಾಗಿ ಓದಿ, ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರ ನಿರ್ದೇಶನದ ಮೇರೆಗೆ ನೆರೆ ಪರಿಹಾರ ವಿತರಣೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಸೋಮವಾರ ಸವಣೂರು ಮತ್ತು ಶಿಗ್ಗಾವಿ ತಾಲ್ಲೂಕಿನಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದೇನೆ. ತನಿಖೆಯ ನಂತರ ತಪ್ಪಿತಸ್ಥರು ಯಾರು ಎಂಬುದು ಗೊತ್ತಾಗಲಿದೆ’ ಎಂದು ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT