ಬೆಳೆ ಮತ್ತು ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ರೈತರು ಆಕ್ಷೇಪಣೆ ಸಲ್ಲಿಸಬಹುದು. ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆ ವಿಮೆ, ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ, ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಬಳಕೆ ಮಾಡಲಾಗುತ್ತದೆ. ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೇ, ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯ ಮಾಹಿತಿಯನ್ನು ಬೆಳೆ ದರ್ಶಕ ಆಫ್ ಮೂಲಕ ತಿಳಿಯಬಹುದು. ಇದರಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅಥವಾ ವ್ಯತ್ಯಾಸಗಳಿದ್ದರೆ, ಆ.18 ರೊಳಗೆ ಆಕ್ಷೇಪಣೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆ, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಮತ್ತು ಬೆಳೆ ಸಮೀಕ್ಷೆ ಮೇಲ್ವಿಚಾರಕರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.