ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಗ್ಗಾವಿ | ವಿದ್ಯುತ್ ಕೊರತೆಗೆ ಕರಕಲಾದ ಬೆಳೆಗಳು; ರೈತರ ಪ್ರತಿಭಟನೆ

Published 3 ಸೆಪ್ಟೆಂಬರ್ 2023, 15:42 IST
Last Updated 3 ಸೆಪ್ಟೆಂಬರ್ 2023, 15:42 IST
ಅಕ್ಷರ ಗಾತ್ರ

ಶಿಗ್ಗಾವಿ: ರೈತರ ಪಂಪಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಮುಂದೆ ಶನಿವಾರ ಪ್ರತಿಭಟಿಸಿ, ಹೆಸ್ಕಾಂ ಅಧಿಕಾರಿ ಸಿ.ಬಿ.ಹೊಸಮನಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಹುಲಗೂರ ಟಿಂಪೋ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮಖ ಬೀದಿಗಳಲ್ಲಿ ಸಂಚರಿತು. ವಿದ್ಯುತ್ ಸಮರ್ಪಕವಾಗಿ ನೀಡದ ಅಧಿಕಾರಿಗಳ ವಿರೋಧ ಘೋಷಣೆ ಕೂಗಿದರು. ಹೆಸ್ಕಾಂ ಕಚೇರಿ ಗೇಟ್ ತೆಗೆದು ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪೊಲೀಸ್ ಸಿಬ್ಬಂದಿ ರೈತರನ್ನು ತಡೆದರು. ಹೀಗಾಗಿ ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹೆಸ್ಕಾಂ ಈಚೆಗೆ ಹಗಲು 3 ತಾಸು, ರಾತ್ರಿ 4 ತಾಸು ವಿದ್ಯುತ್ ನೀಡುವುದರಿಂದ ರೈತರಿಗೆ ರಾತ್ರಿ ನೀರು ಹಾಯಿಸಲು ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಹಾವು, ವಿಷ ಜಂತುಗಳ ಕಡಿತದಿಂದ ರೈತರ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದರು.

ರೈತ ಸಂಘದ ಮಹಿಳಾ ಘಟಕದ ಜಿಲ್ಲಾ ಗೌರವಾಧ್ಯಕ್ಷೆ ಬಸಮ್ಮ ಬಾದಮಗಟ್ಟಿ ಮಾತನಾಡಿ, ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಇಡೀ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ರೈತರನ್ನು ಕಡೆಗಣಿಸಿದರೆ ಮುಂದೆ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಪ್ರತಿಭನಾ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸಿ.ಬಿ.ಹೊಸಮನಿ ರೈತರ ಮನವಿ ಸ್ವೀಕರಿಸಿ,  ‘ವಿದ್ಯುತ್ ಗ್ರಿಡ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಹಗಲು 7 ತಾಸು ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ತಾಂತ್ರಿಕ ದೋಷಗಳನ್ನು ಸರಿಪಡಿಸಿ ತಕ್ಷಣ ಮತ್ತೆ ಹಿಂದಿನಂತೆ ಹಗಲು 7 ತಾಸು ವಿದ್ಯುತ್ ಸರಬರಾಜು ಮಾಡುತ್ತೇವೆ’ ಎಂದು ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಸೋಮಶೇಖರ, ಈರಣ್ಣ ಸಮಗೊಂಡ, ದುಂಡಸಿ ಶೆಟ್ಟರ್, ಮಂಜುನಾಥ ಹಾವೇರಿ, ಮುತ್ತಣ್ಣ ಗುಡಿಗೇರಿ, ಶಂಕರಗೌಡ್ರ ಪಾಟೀಲ, ಬಸಲಿಂಗಪ್ಪ ನರಗುಂದ, ಈರಣ್ಣ ನವಲಗುಂದ ಇದ್ದರು.

ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ರೈತರು ಹೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಹೆಸ್ಕಾಂ ಅಧಿಕಾರಿ ವಿನೂತಾ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಶಂಭಣ್ಣ ಯಲಿಗಾರ ಮಾತನಾಡಿ, ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಹಿತ ಕಾಪಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹೆಸ್ಕಾಂ ಅಧಿಕಾರಿ ವಿನೂತಾ ಮನವಿ ಸ್ವೀಕರಿಸಿ, ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಶಿವಯೋಗೆಪ್ಪ ನವಲಗುಂದ, ಮುತ್ತು ಗಂಜಿಗಟ್ಟಿ, ಅಶೋಕ ಹಾವಣಗಿ, ಸುನೀಲ ಕಾಳೆ, ಎನ್.ಎಸ್.ಕೇರಪ್ಪನವರ, ಲಚಮಪ್ಪ ಲಮಾಣಿ, ಗಂಗಾಧರ ನೆಲ್ಲೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT