ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ದೇವರಾಜ ಅರಸು ಜಯಂತಿ ನಾಳೆ

ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ:
Last Updated 18 ಆಗಸ್ಟ್ 2022, 13:46 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಆ.20ರಂದು ಬೆಳಿಗ್ಗೆ 11.30ಕ್ಕೆ ಹಾವೇರಿ ನಗರದ ಡಾ.ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಜರುಗಲಿದೆ.

ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್‌ ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ನೆಹರೂ ಓಲೇಕಾರ ಅಧ್ಯಕ್ಷತೆ ವಹಿಸಲಿದ್ದು, ಸಂಸದ, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಉಪನ್ಯಾಸಕ ಪ್ರಮೋದ ನಲವಾಗಲ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.

ಮೆರವಣಿಗೆ:

ಆಗಸ್ಟ್ 20ರಂದು ಬೆಳಿಗ್ಗೆ 9.30ಕ್ಕೆ ಹಾವೇರಿ ತಾಲ್ಲೂಕು ಪಂಚಾಯಿತಿ ಆವರಣದಿಂದ ಡಿ.ದೇವರಾಜ ಅರಸುರವರ ಭಾವಚಿತ್ರ ಮೆರವಣಿಗೆ ಹೊರಟು ಡಾ.ಬಿ.ಆರ್.ಅಂಬೇಡ್ಕರ್‌ ಭವನ ತಲುಪಲಿದೆ.

ಕಾರ್ಯಕ್ರಮ ವಿವರ:

ಆ.20ರಂದು ಡಿ.ದೇವರಾಜ ಅರಸು ಭವನದಲ್ಲಿ ವಸ್ತುಪ್ರದರ್ಶನ ಉದ್ಘಾಟನೆ, ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರಧಾನ ಸಮಾರಂಭ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆ.21ರಂದು ಮಧ್ಯಾಹ್ನ 12ರಿಂದ ಡಿ.ದೇವರಾಜ ಅರಸು ಭವನದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಕ್ರೀಡಾ ಹಾಗೂ ಚರ್ಚಾ ಸ್ಪಧೆಗಳು, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ.

ಆಗಸ್ಟ್ 22ರಂದು ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್‌ ಭವನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಅರಣ್ಯ ಬೆಳೆಸುವ ಕುರಿತು ಅರಣ್ಯ ಇಲಾಖೆಯಿಂದ ಅರಿವು ಕಾರ್ಯಕ್ರಮ, ವಿವಿಧ ಶಾಲಾ-ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಛಾಯಾಚಿತ್ರ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT