ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಒಂದೇ ದಿನ 477 ಮನೆಗಳಿಗೆ ಹಾನಿ

Last Updated 24 ಜುಲೈ 2021, 15:55 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಮೂರ್ನಾಲ್ಕು ದಿನ ನಿರಂತರವಾಗಿ ಆರ್ಭಟಿಸಿದ ಮಳೆ ಶನಿವಾರ ಸ್ವಲ್ಪ ಬಿಡುವು ನೀಡಿತು. ನಿರಂತರ ಮಳೆಯ ಪರಿಣಾಮ ಶನಿವಾರ ಒಂದೇ ದಿನ ಜಿಲ್ಲೆಯಾದ್ಯಂತ ಒಟ್ಟು 477 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಹಾವೇರಿ–35, ರಾಣೆಬೆನ್ನೂರು–14, ಬ್ಯಾಡಗಿ–60, ಹಿರೇಕೆರೂರು– 15, ರಟ್ಟೀಹಳ್ಳಿ–93, ಸವಣೂರು– 14, ಶಿಗ್ಗಾವಿ–132 ಹಾಗೂ ಹಾನಗಲ್‌ ತಾಲ್ಲೂಕಿನಲ್ಲಿ 114 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಜುಲೈ 1ರಿಂದ ಇದುವರೆಗೂ ಜಿಲ್ಲೆಯಲ್ಲಿ 900 ಮನೆಗಳಿಗೆ ಹಾನಿಯಾಗಿದೆ.

ಕಳೆದ ಮೂರು ದಿನಗಳಲ್ಲಿ 2653 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿದ್ದು, 151 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶವಾಗಿದೆ. ಹಾನಗಲ್‌ ತಾಲ್ಲೂಕಿನಲ್ಲಿ ಶುಕ್ರವಾರ ಎತ್ತು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಮಳೆಯಿಂದ ಹಾನಿಯಾದ ಗ್ರಾಮಗಳಲ್ಲಿ ಒಟ್ಟು 12 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಮಳೆಯ ವಿವರ (ಮಿಲಿ ಮೀಟರ್‌ಗಳಲ್ಲಿ): ಬ್ಯಾಡಗಿ– 12.6, ಹಾನಗಲ್‌–25.5, ಹಾವೇರಿ–8.8, ಹಿರೇಕೆರೂರು–25.3, ರಾಣೆಬೆನ್ನೂರು–6.6, ಸವಣೂರು–12.9, ಶಿಗ್ಗಾವಿ–23.8, ರಟ್ಟೀಹಳ್ಳಿ– 26.4 ಮಿಲಿ ಮೀಟರ್‌ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT