ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾನಮ್ಮ ದೇವಿ ಜಾತ್ರಾ ಮಹೋತ್ಸವ ನ.22ರಿಂದ

Last Updated 20 ನವೆಂಬರ್ 2022, 4:47 IST
ಅಕ್ಷರ ಗಾತ್ರ

ಹಾವೇರಿ: ನಗರದ ದಾನಮ್ಮದೇವಿ ದೇವಸ್ಥಾನದಲ್ಲಿ ದಾನಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ನ.22 ಮತ್ತು ನ.23ರಂದು ಹಮ್ಮಿಕೊಳ್ಳಲಾಗಿದೆ.

ನ.22ರಂದು ಬೆಳಿಗ್ಗೆ 9ಕ್ಕೆ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿಗಳಿಂದ ಷಟಸ್ಥಲ ಧ್ವಜಾರೋಹಣ ನೆರವೇರಲಿದೆ. ಬೆಳಿಗ್ಗೆ 10ಕ್ಕೆ ನಗರದ ನಾಗೇಂದ್ರನಮಟ್ಟಿಯ ಶ್ರೀಶಕ್ತಿ ವೃದ್ಧಾಶ್ರಮದ ತಾಯಂದಿರಿಗೆ ಗೌರವ ಅರ್ಪಣೆ ನಡೆಯಲಿದೆ. ಸಂಜೆ 7ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದಾನಮ್ಮದೇವಿ ದೇವಸ್ಥಾನ ಟ್ರಸ್ಟ್‌ ಸಮಿತಿ ಅಧ್ಯಕ್ಷೆ ಶೋಭಾತಾಯಿ ಮಾಗಾವಿ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹಾಗೂ ನಗರಸಭಾ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ‘ಶರಣ ಧರ್ಮ’ ಕುರಿತು ಉಪನ್ಯಾಸಕ ಮಾರುತಿ ಶಿಡ್ಲಾಪುರ ಉಪನ್ಯಾಸ ನೀಡಲಿದ್ದಾರೆ. ಮಲ್ಲಿಕಾರ್ಜುನ ಹಿಂಚಿಗೇರಿ ನಿರೂಪಿಸಲಿದ್ದಾರೆ.

ನ.23ರಂದು ಬೆಳಿಗ್ಗೆ 10ಕ್ಕೆ ಗುರುಪಾದದೇವರಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮತ್ತು ಹರಸೂರು ಬಣ್ಣದಮಠದ ಅಭಿನವ ರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳಿಂದ ಆಶೀರ್ವಚನ ನಡೆಯಲಿದೆ. ನಂತರ ಪಲ್ಲಕ್ಕಿ ಸೇವೆ, ಮಧ್ಯಾಹ್ನ 12ಕ್ಕೆ ದಾನೇಶ್ವರಿ ಕಲಾ ಮಂದಿರದಲ್ಲಿ ಪ್ರಸಾದ ಸೇವೆ ನಡೆಯಲಿದೆ ಎಂದು ಟ್ರಸ್ಟ್‌ ಕಮಿಟಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT