ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದವರಿಗೆ ದಂಡ ಹಾಕಿದ ಹಾವೇರಿ ಜಿಲ್ಲಾಧಿಕಾರಿ

Last Updated 24 ಸೆಪ್ಟೆಂಬರ್ 2020, 14:13 IST
ಅಕ್ಷರ ಗಾತ್ರ

ಹಾವೇರಿ: ಕ್ಯಾಂಟೀನ್‌ನಲ್ಲಿ ಮಾಸ್ಕ್‌ ಧರಿಸದೇ ಕುಳಿತಿದ್ದ ಯುವಕನಿಗೆ ಸ್ವತಃ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ₹100 ದಂಡ ಹಾಕಿ, ಕೋವಿಡ್‌ ಸುರಕ್ಷತಾ ಕ್ರಮ ಪಾಲಿಸುವಂತೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಕೋವಿಡ್-19 ಕುರಿತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ, ನಂತರ ಜಾಥಾದಲ್ಲಿ ಪಾಲ್ಗೊಂಡ ಅವರು ಮಾಸ್ಕ್‌ ಧರಿಸುವ ಬಗ್ಗೆ ಜಾಗೃತಿ ಮೂಡಿಸಿದರು. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಪಾಡಿಕೊಳ್ಳಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಸೋಂಕಿತರು ಹೋಂ ಐಸೋಲೇಷನ್‍ನಲ್ಲಿ ಇರಲು ಅನುಮತಿ ನೀಡಲಾಗಿತ್ತು. ಚಿಕಿತ್ಸೆ ಪಡೆಯಲು ನಿರ್ಲಕ್ಷ್ಯವಹಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಮರಣ ಪ್ರಮಾಣ ಅಧಿಕವಾಗಿತ್ತು. ಈಗ ಮರಣ ಪ್ರಮಾಣ ಕಡಿಮೆಯಾಗಿದೆ. ಜಿಲ್ಲೆಯ ಪ್ರಮಾಣ ಶೇ 1.18 ರಷ್ಟಿದೆ. ರಾಜ್ಯದ ಪ್ರಮಾಣ ಶೇ 1.9 ರಷ್ಟಿದೆ. ಈ ಹಿಂದೆ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸಿದವರಿಂದ ಈವರೆಗೆ ₹6 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಮತ್ತೆ ದಂಡ ಹಾಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವ ಕಾರ್ಯ ತೀವ್ರಗೊಳಿಸುತ್ತೇವೆ. ಇಂದು ₹3 ಸಾವಿರ ದಂಡ ಹಾಕಲಾಗಿದೆ. ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿಯನಲ್ಲಿ ನಗರಸಭೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಔಷಧ ಕೊರತೆ ಇಲ್ಲ:ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರಿಗೆ ಯಾವುದೇ ಔಷಧದ ಕೊರತೆ ಇಲ್ಲ. ಸಹಾಯವಾಣಿಗೆ ಸಂಪರ್ಕಿಸಿದರೆ ಔಷಧ ವ್ಯವಸ್ಥೆ ಮಾಡಲಾಗುವುದು. ರೋಗನಿರೋಧಕ ಶಕ್ತಿ ಹೆಚ್ಚಿಸುವ ಹಿನ್ನೆಲೆಯಲ್ಲಿ ಆಯುಷ್‌ ಇಲಾಖೆಯಿಂದ ಉಚಿತವಾಗಿ ಚವನ್‍ಪ್ರಾಶ್ ಹಾಗೂ ಶಕ್ತಿವರ್ಧಕ ವಿಟಮಿನ್ ಮಾತ್ರೆಗಳನ್ನು ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಎಸ್ಪಿ ಕೆ.ಜಿ.ದೇವರಾಜು, ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ನಗರಸಭೆ ಪೌರಾಯುಕ್ತ ಬಸವರಾಜ ಜಿದ್ದಿ, ಡಿ.ವೈ.ಎಸ್.ಪಿ. ವಿಜಯಕುಮಾರ ಸಂತೋಷ್, ತಹಶೀಲ್ದಾರ ಶಂಕರ್, ಸಿ.ಪಿ.ಐ.ಟಿ. ಮಂಜು, ಕಾವ್ಯಾ ಕೆ., ಸಂತೋಷ್ ಪವಾರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT