ಬುಧವಾರ, ಅಕ್ಟೋಬರ್ 28, 2020
28 °C

ಮತಗಟ್ಟೆಗಳ ಸಿದ್ಧತೆ ಪರಿಶೀಲಿಸಿದ ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಅ.28ರಂದು ನಡೆಯಲಿರುವ ಚುನಾವಣೆಯ ಮತಗಟ್ಟೆಗಳ ಸಿದ್ಧತೆ ಕುರಿತಂತೆ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪರಿಶೀಲನೆ ನಡೆಸಿದರು.

ಜಿಲ್ಲೆಯ ಹಲಗೇರಿ, ರಟ್ಟೀಹಳ್ಳಿ, ಹೊಸಕಟ್ಟೆ, ತಿಳವಳ್ಳಿ, ಅಕ್ಕಿಆಲೂರ ಮತಗಟ್ಟೆಗಳಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ, ಕಟ್ಟಡದ ಸ್ಥಿತಿಗತಿ, ಶೌಚಾಲಯದ ವ್ಯವಸ್ಥೆ, ಅಂಗವಿಕಲ ಮತದಾರರಿಗೆ ಅಗತ್ಯವಾದ ರ‍್ಯಾಂಪ್‌ ವ್ಯವಸ್ಥೆ, ಪೀಠೋಪಕರಣಗಳು ಸೇರಿದಂತೆ ಮೂಲಸೌಕರ್ಯ ಹಾಗೂ ಭದ್ರತಾ ವಿಷಯಗಳ ಕುರಿತಂತೆ ಪರಿಶೀಲನೆ ನಡೆಸಿದರು. ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ನೀಡಿದರು.

ಸ್ಥಳೀಯ ತಹಶೀಲ್ದಾರ್‌ಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದು, ಮತಗಟ್ಟೆಗಳ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿಗಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.