ತಂಬಾಕು ದುಷ್ಪರಿಣಾಮ: ಜಾಗೃತಿ ಮೂಡಿಸಿ– ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

ಬುಧವಾರ, ಮೇ 22, 2019
23 °C
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ತಂಬಾಕು ದುಷ್ಪರಿಣಾಮ: ಜಾಗೃತಿ ಮೂಡಿಸಿ– ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

Published:
Updated:
Prajavani

ಹಾವೇರಿ: ತಂಬಾಕು ಉತ್ಪನ್ನಗಳ ಸೇವೆನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಅನಧಿಕೃತ ಮಾರಾಟ ಕಂಡುಬಂದಲ್ಲಿ ದಾಳಿ ನಡೆಸಿ, ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಂಬಾಕು ನಿಯಂತ್ರಣ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ದಂಡ ವಿಧಿಸಬೇಕು. 18 ವರ್ಷದೊಳಗಿನ ವ್ಯಕ್ತಿಗಳಿಗೆ ಹಾಗೂ ಶಿಕ್ಷಣ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವು ಅಪರಾಧವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಧೂಮಪಾನ ನಿಷೇಧದ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಕಾಲಕಾಲಕ್ಕೆ ಅಂಗಡಿಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಬೇಕು. ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟ ಹಾಗೂ ಕಾನೂನು ಉಲ್ಲಂಘನೆ ಪ್ರಕರಣ ಮಾಹಿತಿ ನೀಡಲು ಟ್ವೀಟರ್ ಖಾತೆ ರಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಡಾ.ಸಂತೋಷ್ ಮಾತನಾಡಿ, 2018–19 ನೇ ಸಾಲಿನಿಂದ ಈ ಕಾರ್ಯಕ್ರಮವು ಜಾರಿಗೆ ಬಂದಿದ್ದು, 2018ರ ಜೂನ್‌ ನಿಂದ ಈ ತನಕ 9 ಕಡೆ ದಾಳಿ ನಡೆಸಿ 70 ಪ್ರಕರಣಗಳನ್ನು ದಾಖಲಿಸಲಾಗಿದೆ. 65 ಶಾಲಾ-ಕಾಲೇಜುಗಳಲ್ಲಿ ಜಾಗೃತಿ, 29 ಸಮುದಾಯ ಗುಂಪು ಚರ್ಚೆ ಹಾಗೂ ಆರು ಕಡೆಗಳಲ್ಲಿ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆ. 800 ಜನರಿಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಶಿಗ್ಗಾವಿ, ಹಾನಗಲ್ ಹಾಗೂ ಹಾವೇರಿ ಬಸ್‌ ನಿಲ್ದಾಣಗಳಲ್ಲಿ ಅನಧಿಕೃತವಾಗಿ ತಂಬಾಕು ಉತ್ಪನ್ನಗಳ ಮಾರಾಟವು ಕಂಡುಬಂದಿದ್ದು, ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಗದೀಶ ಮಾತನಾಡಿ, ನಗರದ ಕೇಂದ್ರೀಯ ವಿದ್ಯಾಲಯ ಹಾಗೂ ತರಳಬಾಳು ಶಾಲೆಯನ್ನು ತಂಬಾಕು ಮುಕ್ತ ಶಾಲೆಯಂದು ಗುರುತಿಸಲಾಗಿದೆ. ತಂಬಾಕು ರಹಿತ ಶಾಲೆಗಳ ಮಾಹಿತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೋರಲಾಗಿದೆ ಎಂದರು. 

ಮುಂದಿನ ದಿನಗಳಲ್ಲಿ ಗ್ರಾಮ ಸಭೆಗಳಲ್ಲಿ ಸಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮೇ 31ರಂದು ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅಂದು ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇದ್ದರು.  

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !