ರಾಣೆಬೆನ್ನೂರು: ತಾಲ್ಲೂಕಿನ ಕಮದೋಡ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ- 4ರಲ್ಲಿ ನಿಂತಿದ್ದ ಕಂಟೇನರ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದವರಾದ ಕೆ.ಎನ್. ಹನುಮಂತಪ್ಪ ನಿಂಗಪ್ಪ (60) ಗೀತಮ್ಮ ಅಲಿಯಾಸ್ ರಾಜೇಶ್ವರಿ (45) ಮತ್ತು ಮೊಮ್ಮಗಳು ಶಿವಾನಿ (12) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಗಂಭೀರವಾಗಿ ಗಾಯಗೊಂಡ ಮಹಿಳೆ ವೀಣಾ ಅವರನ್ನು ರಾಣೆಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಮದುವೆ ಮುಗಿಸಿಕೊಂಡು ಕುಂಬಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಿಪಿಐ ಭಾಗ್ಯವತಿ ಮತ್ತು ಪಿಎಸ್ಐ ಮಂಜುನಾಥ ಕುಪ್ಪೇಲೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.