ಗುರುವಾರ , ಅಕ್ಟೋಬರ್ 22, 2020
22 °C

ರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ: ಸಂಜಯ ಶೆಟ್ಟಣ್ಣನವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಈ ವರ್ಷ ನ.1ರಂದು ಜಿಲ್ಲಾ ಕೇಂದ್ರ ಒಳಗೊಂಡಂತೆ ಎಲ್ಲ ತಾಲ್ಲೂಕು ಆಡಳಿತಗಳು ಸರಳವಾಗಿ ಕನ್ನಡ ರಾಜ್ಯೋತ್ಸವ ಸಮಾರಂಭ ಆಯೋಜಿಸುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ ಸೂಚನೆ ನೀಡಿದರು.

ಜಿಲ್ಲಾಡಳಿತ ಸಭಾಂಗಣದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿಡಿಯೊ ಸಂವಾದದ ಮೂಲಕ ಎಲ್ಲ ತಾಲ್ಲೂಕು ತಹಶೀಲ್ದಾರ್‌ಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕರ್ನಾಟಕ ವಿಧಾನ ಪರಿಷತ್ತಿಗೆ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಆಯೋಗದ ಮಾರ್ಗಸೂಚಿಯಂತೆ ಅಧಿಕಾರಿಗಳು ರಾಜ್ಯೋತ್ಸವ ಆಚರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ರಾಜ್ಯೋತ್ಸವ ಸಮಾರಂಭ ಆಯೋಜಿಸುವ ಸ್ಥಳದಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಲು ಪ್ರತಿ ಆರು ಅಡಿ ಅಂತರದಲ್ಲಿ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. 200 ಸಂಖ್ಯೆಯೊಳಗೆ ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವಂತೆ ನಿಗಾವಹಿಸಬೇಕು. 60 ವರ್ಷದ ಮೇಲ್ಪಟ್ಟು ಹಾಗೂ 10 ವರ್ಷದ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಎಚ್ಚರಿಕೆ ವಹಿಸಬೇಕು. ಪ್ರತಿಯೋಬ್ಬರು ಮಾಸ್ಕ್‌ ಧರಿಸಬೇಕು ಎಂದು ಸೂಚನೆ ನೀಡಿದರು. 

ನೇರವಾಗಿ ಕ್ರೀಡಾಂಗಣದಲ್ಲಿ ಸಮಾವೇಶಗೊಂಡು ನಾಡಗೀತೆ, ರಾಷ್ಟ್ರಗೀತೆ, ರಾಷ್ಟ್ರ ಧ್ವಜಾರೋಹಣ, ರಾಜ್ಯೋತ್ಸವ ಸಂದೇಶ ವಂದನಾರ್ಪಣೆಯೊಂದಿಗೆ ಸಮಾರಂಭ ಸಮಾಪ್ತಿಗೊಳಿಸಬೇಕು. ಸನ್ಮಾನ ಹಾಗೂ ಸಂದೇಶ ವಾಚನ ಕುರಿತಂತೆ ಸರ್ಕಾರದ ಮಾರ್ಗಸೂಚಿ ಇಷ್ಟರಲ್ಲೇ ಬರಲಿದೆ, ಇದರನ್ವಯ ಕ್ರಮವಹಿಸುವುದು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್ ಯೋಗೇಶ್ವರ, ವಾರ್ತಾಧಿಕಾರಿ ಬಿ.ಆರ್ ರಂಗನಾಥ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ ಹಾಗೂ ವಿವಿಧ ಅಧಿಕಾರಿಗಳು ವಿಡಿಯೊ ಸಂವಾದದ ಮೂಲಕ ವಿವಿಧ ತಾಲೂಕ ತಹಶೀಲ್ದಾರ್‌ಗಳು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು