ಹಾವೇರಿ: ‘ಜಿಲ್ಲೆಯಲ್ಲಿ ಶುಂಠಿ ಖರೀದಿ ಕೇಂದ್ರ ತೆರೆಯಬೇಕು. ಬೆಳೆ ವಿಮೆಯಲ್ಲಾದ ಅನ್ಯಾಯ ಸರಿಪಡಿಸಬೇಕು. ವರದಾ– ಬೇಡ್ತಿ ನದಿ ಯೋಜನೆ ತ್ವರಿತವಾಗಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 24ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹಲವು ರೈತರು ಶುಂಠಿ ಬೆಳೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶುಂಠಿ ದರ ಕುಸಿದಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸ್ಥಿತಿ ನಿರ್ಮಾಣವಾಗಿದೆ. ಶುಂಠಿಯನ್ನು ಕ್ವಿಂಟಲ್ಗೆ ₹ 10 ಸಾವಿರ ನೀಡಿ ಖರೀದಿಸಲು ಕೇಂದ್ರ ಸರ್ಕಾರ ಖರೀದಿ ಕೇಂದ್ರ ತೆರೆಯಬೇಕು’ ಎಂದು ಒತ್ತಾಯಿಸಿದರು.

‘ವರದಾ ಮತ್ತು ಬೇಡ್ತಿ ನದಿ ಜೋಡಣೆ ಮಾಡುವಂತೆಯೂ ಹೋರಾಟ ಮಾಡಲಾಗುತ್ತಿದೆ. ಹಾವೇರಿ ಜಿಲ್ಲೆಯ ನೀರಾವರಿಗೆ ಅನುಕೂಲ ಕಲ್ಪಿಸಲು ಈ ಯೋಜನೆ ಮಹತ್ವದ್ದಾಗಿದೆ. ಯೋಜನೆ ಜಾರಿ ಮಾಡಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಒಲುವು ತೋರಿದ್ದಾರೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ ಶುರುವಾಗಿದೆ. ಸೂಕ್ತ ಸಮಯದಲ್ಲಿ ವಿದ್ಯುತ್ ಲಭ್ಯವಾಗುತ್ತಿಲ್ಲ. ರೈತರು ಬೆಳೆದಿರುವ ಬೆಳೆಗಳು ಒಣಗುತ್ತಿವೆ. ಹೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಘಟಕಗಳ ಸ್ಥಾಪನೆಗೂ ಹಿಂದೇಟು ಹಾಕಲಾಗುತ್ತಿದೆ. ಹೆಸ್ಕಾಂನಿಂದ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದರು.

‘ಬೆಳೆ ವಿಮೆಯಲ್ಲಿ ಸಾಕಷ್ಟು ತಾರತಮ್ಯವಾಗಿದೆ. ಈ ಬಗ್ಗೆ ಹಲವು ಬಾರಿ ಹೋರಾಟ ಮಾಡಲಾಗಿದ್ದು, ಸರ್ಕಾರ ಜಾಣ ಕುರುಡನಂತೆ ವರ್ತಿಸುತ್ತಿದೆ. ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಅತಿವೃಷ್ಟಿ ಮಳೆಯಿಂದ ತೋಟಗಾರಿಕೆ ಬೆಳೆ ಹಾಗೂ ಮೆಕ್ಕೆಜೋಳ, ಹತ್ತಿ, ಶೇಂಗಾ, ಸೋಯಾಬಿನ್ ನಾಶವಾಗಿದೆ. ಹಾನಿಯಾದ ರೈತರಿಗೆ ಬೆಳೆ ಪರಿಹಾರ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

‘ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಗಳ ದಬ್ಬಾಳಿಕೆ ಹೆಚ್ಚಾಗಿದೆ. ಸಾಲ ವಸೂಲಾತಿ ಮಾಡುವ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. ಇದರಿಂದ ಬೇಸತ್ತ ಹಲವು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿರುವವರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೆರ, ಎಚ್.ಎಚ್. ಮುಲ್ಲಾ, ಶಿವಯೋಗಿ ಹೊಸಗೌಡ್ರ, ಯಶವಂತ ಯಡಗೊಡಿ, ರವಿ ಅಂಗಡಿ, ಸುರೇಶ ಚಲವಾದಿ ಇದ್ದರು.

ಬೆಳೆ ವಿಮೆಯಲ್ಲಿ ಸಾಕಷ್ಟು ತಾರತಮ್ಯ ಅತಿವೃಷ್ಟಯಿಂದ ಬೆಳೆಗಳು ನಾಶ ಹೆಚ್ಚಾದ ಫೈನಾನ್ಸ್ ಕಂಪನಿಗಳ ದಬ್ಬಾಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.