ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕ ಇಳಿಕೆ

Published 6 ಮೇ 2024, 13:39 IST
Last Updated 6 ಮೇ 2024, 13:39 IST
ಅಕ್ಷರ ಗಾತ್ರ

ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಖ್ಯಾತಿಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 22,815 ಚೀಲ (5,703 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಇಳಿಕೆಯಾಗಿದೆ.

ಕಳೆದ ಗುರುವಾರ ಮಾರುಕಟ್ಟೆಗೆ 34,220 ಚೀಲ (8,555 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿತ್ತು. ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಮಂಗಳವಾರ ನಡೆಯುವ ಹಿನ್ನೆಲೆಯಲ್ಲಿ ರೈತರು ಮತ್ತು ವರ್ತಕರು ಸಕ್ರಿಯವಾಗಿರುವುದರಿಂದ ಮೆಣಸಿನಕಾಯಿ ಆವಕದಲ್ಲಿ ಇಳಿಕೆ ಕಂಡಿದೆ.

ಸೋಮವಾರ 2,709 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟವಿಲ್ಲದ 125 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 2 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹34,399ರಂತೆ, ಒಂದು ಚೀಲ ಕಡ್ಡಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹28,099ರಂತೆ ಮತ್ತು ಗುಂಟೂರು ತಳಿ ₹17,529ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿದೆ.

ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹29,799, ಬ್ಯಾಡಗಿ ಕಡ್ಡಿ ₹24,509 ಹಾಗೂ ಗುಂಟೂರ ತಳಿ ₹11,669ರಂತೆ ಮಾರಾಟವಾಗಿವೆ.

ಟೆಂಡರ್ ಪ್ರಕ್ರಿಯೆಯಲ್ಲಿ 224 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಸೋಮವಾರದ ಮಾರುಕಟ್ಟೆ ದರ (ಕ್ವಿಂಟಲ್‌ಗೆ–₹ಗಳಲ್ಲಿ)

ತಳಿ ; ಕನಿಷ್ಠ ; ಗರಿಷ್ಠ
ಬ್ಯಾಡಗಿ ಕಡ್ಡಿ ; 2,269 ; 28,099
ಬ್ಯಾಡಗಿ ಡಬ್ಬಿ ; 2,829 ; 34,399
ಗುಂಟೂರ ತಳಿ ; 0839 ; 17,529

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT