ಮಂಗಳವಾರ, ಆಗಸ್ಟ್ 11, 2020
26 °C

ಪದವಿ ಪರೀಕ್ಷೆ ರದ್ದು: ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವ ಕ್ರಮವನ್ನು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿ ಸ್ವಾಗತಿಸಿದೆ. 

ಅಂತಿಮ ವರ್ಷದ ಹಾಗೂ ಬ್ಯಾಕ್ ಲಾಗ್ (ಬಾಕಿ) ವಿಷಯಗಳನ್ನು ಉಳಿಸಿಕೊಂಡ ವಿಷಯಗಳನ್ನು ಪಾಸು ಮಾಡಲು ಮುಂದಾಗಲಿ. ಇಲ್ಲವಾದಲ್ಲಿ ಈ ವಿದ್ಯಾರ್ಥಿಗಳ ಪರೀಕ್ಷೆಯನ್ನು ನಡೆಸುವ ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ರೀತಿಯ ಪೂರಕ ಮತ್ತು ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಬೇಕು ಎಂದು ಆಗ್ರಹಿಸಿದೆ. 

ವಿದ್ಯಾರ್ಥಿಗಳಿಂದ ಈಗಾಗಲೇ ಸಂಗ್ರಹಿಸಿರುವ ಪರೀಕ್ಷಾ ಶುಲ್ಕವನ್ನು ವಾಪಸ್ ನೀಡಬೇಕು ಮತ್ತು ಪಠ್ಯಪುಸ್ತಕ, ಕೊರತೆ ಸೇರಿದಂತೆ ಇತರ ಶೈಕ್ಷಣಿಕ ಸಂಬಂಧಿತ ಅಗತ್ಯ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.