ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಲಾಂತರಿ ಬಿಟಿ ಬೀಜ ನಿಷೇಧಕ್ಕೆ ಆಗ್ರಹ

Published : 22 ಸೆಪ್ಟೆಂಬರ್ 2024, 15:35 IST
Last Updated : 22 ಸೆಪ್ಟೆಂಬರ್ 2024, 15:35 IST
ಫಾಲೋ ಮಾಡಿ
Comments

ಬ್ಯಾಡಗಿ: ‘ರೈತರಿಗೆ ಮಾರಕವಾಗಿರುವ ಕುಲಾಂತರಿ ಬಿಟಿ ಬೀಜಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಮ ವಹಿಸಬೇಕು’ ಎಂದು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಣ್ಣ ಎಲಿ ಆಗ್ರಹಿಸಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೈಬ್ರೀಡ್‌ ಬೀಜ ಮತ್ತು ರಾಸಾಯನಿಕ ಗೊಬ್ಬರದ ಬಳಕೆಯಿಂದ ಶೇ30ರಷ್ಟು ಕೃಷಿ ಭೂಮಿ ನಾಶವಾಗಿದೆ. ಕುಲಾಂತರಿ ಬೀಜಗಳನ್ನು ಜೈವಿಕ ತಂತ್ರಜ್ಞಾನದಿಂದ ತಯಾರಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ಮಾನವನ ಆರೋಗ್ಯ, ಪರಿಸರ ಹಾಗೂ ಆಹಾರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸದೇ ತರಾತುರಿಯಲ್ಲಿ ಕುಲಾಂತರಿ ತಳಿಗಳನ್ನು ಪರಿಚಯಿಸಲಾಗುತ್ತಿದೆ’ ಎಂದು ಆರೋಪಿಸಿದರು.

‘ಆಧುನಿಕ ಜೈವಿಕ ತಂತ್ರಜ್ಞಾನ ಅಸುರಕ್ಷಿತವಾಗಿದೆ. ಇದು ಕೃಷಿ ಕ್ಷೇತ್ರಕ್ಕೆ ಹುಸಿ ಭರವಸೆ ನೀಡುತ್ತದೆ. ಕೃಷಿ ವ್ಯವಸ್ಥೆಯನ್ನು ಹಾಳುಗಡೆವುವ ಸಂಚು ಇದರಲ್ಲಿ ಅಡಗಿದೆ. ಈ ಕಾನೂನನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಕಿರಣ ಗಡಿಗೋಳ, ಸದಸ್ಯರಾದ ಶಂಕರ ಮರಗಾಲ, ಕೆ.ವಿ.ದೊಡ್ಡಗೌಡ್ರ, ಚಿಕ್ಕಪ್ಪ ಛತ್ರದ, ಅಶೋಕ ಮಾಳೇನಹಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT