ರಾಣೆಬೆನ್ನೂರು: ತಾಲ್ಲೂಕಿನ ಮುದೇನೂರು-ನಾಗೇನಹಳ್ಳಿ ಮಾರ್ಗದಲ್ಲಿ ಸಮರ್ಪಕವಾಗಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಒತ್ತಾಯಿಸಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾವೇರಿ ಜಿಲ್ಲೆಯ ವಾಕರಾರ ಸಾರಿಗೆ ಸಂಸ್ಥೆಯ ಡಿಸಿ ಶಶಿಧರ್ ಕುಂಬಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.