ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದ ರಸ್ತೆ ದುರಸ್ತಿಗೆ ಆಗ್ರಹ

Last Updated 6 ಆಗಸ್ಟ್ 2022, 13:01 IST
ಅಕ್ಷರ ಗಾತ್ರ

ಹಾವೇರಿ: ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾ ಕೇಂದ್ರ ಸ್ಥಳವಾಗಿರುವ ಹಾವೇರಿ ನಗರದಲ್ಲಿ ಬಹತೇಕ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳು ಸೃಷ್ಟಿಯಾಗಿವೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ನಗರಸಭೆಯಿಂದ ನಗರದ ಜನತೆಗೆ ಪೂರೈಸಲಾಗುತ್ತಿರುವ ನೀರು ಕಲುಷಿತವಾಗಿದ್ದು, ರಾಡಿ ನೀರನ್ನು ಶುದ್ಧೀಕರಿಸದೇ
ಪೂರೈಸಲಾಗುತ್ತಿದೆ. ಕೂಡಲೇ ಶುದ್ಧ ನೀರು ಸರಬರಾಜು ಮಾಡಬೇಕು ಎಂದು ಶನಿವಾರ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿಯವರಿಗೆ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ನಗರದ ಮುನ್ಸಿಪಲ್ ಹೈಸ್ಕೂಲ್‌ ಬಳಿ ಜಿಲ್ಲಾ ಕ್ರೀಡಾಂಗಣಕ್ಕೆ ಹೋಗುವ ಮುಖ್ಯರಸ್ತೆಯಲ್ಲಿ ದೊಡ್ಡ, ದೊಡ್ಡ ಗುಂಡಿಗಳು ಬಿದ್ದಿವೆ.
ಮಹಾತ್ಮ ಗಾಂಧಿ ರಸ್ತೆಯಲ್ಲೂ ಸಹ ಅನೇಕ ಗುಂಡಿಗಳು ಬಿದ್ದಿವೆ. ಎಪಿಎಂಸಿ ಬಳಿ ರಸ್ತೆಗಳು ಹಾಳಾಗಿವೆ. ಈ ರಸ್ತೆಯಲ್ಲಿ ನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ, ಕೂಲಿಕಾರ್ಮಿಕರು ಓಡಾಡುತ್ತಾರೆ. ಹಾಳಾಗಿರುವ ರಸ್ತೆಗಳಿಂದ ನಿತ್ಯ ಸಮಸ್ಯೆಗಳನ್ನು
ಎದುರಿಸುತ್ತಿದ್ದಾರೆ. ತಕ್ಷಣ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಮನವಿ ಮಾಡಿದರು.

ಜಯ ಕರ್ನಾಟಕ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ಆನವಟ್ಟಿ, ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ್ ಬೆಂಗಳೂರು, ಜಿಲ್ಲಾ ಘಟಕದ ಉಪಾಧ್ಯಕ್ಷ ಸತೀಶ ಮಡಿವಾಳರ, ಜಿಲ್ಲಾ ಕಾರ್ಯದರ್ಶಿ ರಮೇಶ ಜಾಲಿಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಮುಗದೂರ, ಶಹರ ಘಟಕದ ಅಧ್ಯಕ್ಷ ಸಂತೋಷ ಮಧುರಕರ, ಮೌನೇಶಗೌಡ ಪಾಟೀಲ, ದಿಲೀಪ ಹರವಿ, ವೀರೇಶ ಕಡ್ಡಿಪುಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT