ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಬಸ್‌ ಸೌಲಭ್ಯಕ್ಕೆ ಆಗ್ರಹ

Last Updated 15 ಫೆಬ್ರುವರಿ 2021, 12:48 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕಿನ ಮೇವುಂಡಿ ಮತ್ತು ತೆರದಹಳ್ಳಿ ಗ್ರಾಮಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬಸ್ ಬಿಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ಕೋವಿಡ್-19ನಿಂದ ಗ್ರಾಮೀಣ ಪ್ರದೇಶದ ಸಾರಿಗೆಯನ್ನು ನಿಲ್ಲಿಸಲಾಗಿತ್ತು. ಶಾಲಾ-ಕಾಲೇಜುಗಳನ್ನು ಸರ್ಕಾರ ಪ್ರಾರಂಭಿಸಿ ತರಗತಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಈಗಲಾದರೂ ಸಾರಿಗೆ ಸಂಸ್ಥೆ ಅಧಿಕಾರಿಗಳು ಎಲ್ಲ ಮಾರ್ಗಗಳಿಗೂಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿನಿತ್ಯ ಹಾವೇರಿ ಕೇಂದ್ರಕ್ಕೆ ಬರುವ ಸಾವಿರಾರು ವಿದ್ಯಾರ್ಥಿಗಳು, ನೌಕರರು, ಸಾರ್ವಜನಿಕರು ಸರ್ಕಾರಿ ಬಸ್‌ಗಳಿಲ್ಲದೆ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ಎಫ್ಐ ಮುಖಂಡರಾದ ಮಹತೇಶ ಪುರದ ಮಾತಾನಾಡಿ, ‘ಹಾವೇರಿ ನಗರದಿಂದ ಮೇವುಂಡಿ ಮತ್ತು ತೆರದಹಳ್ಳಿ ಗ್ರಾಮಕ್ಕೆ ಬೆಳಗ್ಗೆ 6 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಎಂದು ಆಗ್ರಹಿಸಿದರು.

ಮಹೇಶ್ ಬಾಲಣ್ಣನವರ, ಗಿರೀಶ್‌ ಗೊರವರ, ಮಹೇಶ್, ಕಿರಣ ಮಾಳಮ್ಮನವರ, ವಿನಾಯಕ, ಲಕ್ಷ್ಮಣ್ ಮರಡೂರ, ಫಕೀರಗೌಡ ಪಾಟೀಲ್, ಬಸವರಾಜ ಪವಾಲಿ, ಆನಂದ ಅಂಕಲಿ, ನಾಗರತ್ನ ಬ.ತಳ್ಳಳ್ಳಿ, ಎನ್.ಎನ್. ಹಾವನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT