ರಾಣೆಬೆನ್ನೂರು: ತಾಲ್ಲೂಕಿನ ಹುಲಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಸ್ವಾಭಿಮಾನಿ ಕರವೇ ವತಿಯಿಂದ ತಾಲ್ಲೂಕು ಪಂಚಾಯಿತಿ ಇಒ ಪರಮೇಶ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸ್ವಾಭಿಮನಿ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಪ್ಪ ಬಣಕಾರ ಮಾತನಾಡಿ, ‘ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಕಟ್ಟಡ ನಿರ್ಮಾಣ ಆರಂಭವಾಗಿ ಮೂರು ವರ್ಷಗಳು ಕಳೆದಿವೆ. ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಮಕ್ಕಳು ಸಮೀಪದ ಚರಂಡಿಯನ್ನು ಶೌಚಕ್ಕೆ ಬಳಸುತ್ತಿದ್ದಾರೆ’ ಎಂದು ಗಮನಕ್ಕೆ ತಂದರು.

‘ಕೂಡಲೇ ಶೌಚಾಲಯ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದರೆ ನದಿಹರಳಹಳ್ಳಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲಾ ಕಾರ್ಮಿಕರ ಘಟಕದ ಅಧ್ಯಕ್ಷ ಪರಶುರಾಮ ಕುರುವತ್ತಿ, ರಿಯಾಜ್ ದೊಡ್ಡಮನಿ, ಮಾಂತೇಶ ಮ್ಯಾಗೇರ, ಭಾಷಾ ಹಂಪಾಪಟ್ಟಣ, ರೇವಣಸಿದ್ಧಪ್ಪ ಸಣ್ಣಸಂಗಾಪುರ, ಗಿರೀಶ ಉಜ್ಜೆರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.