ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ’

Last Updated 16 ಜನವರಿ 2021, 15:19 IST
ಅಕ್ಷರ ಗಾತ್ರ

ಹಾವೇರಿ: ‘ತಾಯಿಯಾಗಿ, ಹೆಂಡತಿಯಾಗಿ ಹೆಣ್ಣು ಬೇಕು. ಆದರೆ, ಮಗಳಾಗಿ ಏಕೆ ಬೇಡ. ಹೆಣ್ಣು- ಗಂಡು ಎಂಬ ಭೇದ ಬೇಡ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕು’ ಎಂದು ಶಾಸಕ ನೆಹರು ಓಲೇಕಾರ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಯೋಜನೆಯ ಅಂಗವಾಗಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಹೆಣ್ಣು ಮಗುವಿನ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಂಡು- ಹೆಣ್ಣಿನ ನಡುವೆ ಸಮಾನತೆ ಇರಲಿ, ಹೆಣ್ಣು ಮಕ್ಕಳ ಅಭಿವೃದ್ಧಿಗೆ, ಶಿಕ್ಷಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯಿಂದ ಬೀದಿ ನಾಟಕ, ಜಾಗೃತಿ ಜಾಥಾಗಳು, ಭಿತ್ತಿ ಪತ್ರಗಳ ಮೂಲಕ ಹೆಣ್ಣು ಮಗುವಿನ ರಕ್ಷಣೆಯ ಕುರಿತಾಗಿ ಅರಿವು ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

ಜನವರಿ ತಿಂಗಳಲ್ಲಿ ಜನಿಸಿದ ಅಂಗನವಾಡಿ ಹೆಣ್ಣು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಅಡಿಯಲ್ಲಿ 5 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ ಮತ್ತು 5 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ವಿರೂಪಾಕ್ಷಪ್ಪ ಹುಲ್ಲೂರು, ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಭೋಜರಾಜ ಕೆರೂಡಿ, ಕೆ.ಸಿ.ಕೋರಿ, ಹಾವೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸರಾಜ ಡಿ.ಸಿ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಚ್.ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ, ಮೇಲ್ವಿಚಾರಕಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT