ಶನಿವಾರ, ಜನವರಿ 23, 2021
24 °C

ಗೌರವಧನ ಹೆಚ್ಚಳಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ರಾಜ್ಯದ 141 ವಿಶೇಷ ಶಾಲೆಗಳಿಗೆ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕ/ ಶಿಕ್ಷಕಕೇತರ ಸಿಬ್ಬಂದಿಯ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. 

ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸರಿಯಾದ ಸಮಯದಲ್ಲಿ ಗೌರವಧನ ದೊರಕದೆ ಹತಾಶರಾಗಿದ್ದಾರೆ. ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ಗಳು ಯಾವುದೇ ಸಿಬ್ಬಂದಿಯ ವೇತನ ಕಡಿತಗೊಳಿಸಬಾರದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿವೆ. ಹೀಗಾಗಿ ಸಂಕಷ್ಟದಲ್ಲಿರುವ ನಮಗೆ ನೆರವು ನೀಡಬೇಕು ಎಂದು ಒತ್ತಾಯಿಸಿದರು. 

ಸಂಘದ ಅಧ್ಯಕ್ಷ ಎಚ್‌.ಆರ್‌. ಶಿವಕುಮಾರ, ಕಾರ್ಯದರ್ಶಿ ಎಚ್‌.ಜೆ.ಜಾಡರ, ಖಜಾಂಚಿ ಸುಭಾಸ ಮಲ್ಲಾಡದ ಮುಂತಾದವರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು