ಗುರುವಾರ , ಡಿಸೆಂಬರ್ 3, 2020
23 °C

ನವಜಾತ ಶಿಶುವಿನ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವಣೂರ: ತಾಲ್ಲೂಕಿನ ಇಸ್ಲಾಂಪೂರ ಗ್ರಾಮದ ಹತ್ತಿರದ ಸಣ್ಣ ಕೆರೆಯಲ್ಲಿ ಮಂಗಳವಾರ ಬೆಳಿಗ್ಗೆ  ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.

ಶಿಶುವಿನ ಮೃತದೇಹ ನೀರಿನಲ್ಲಿ ತೆಲುತ್ತಿದ್ದನ್ನು ಕಂಡು ದಾರಿಹೋಕರು ಪೋಲಿಸರಿಗೆ ವಿಷಯ ತಿಳಿಸಿದ್ದಾರೆ. ಸಿಡಿಪಿಒ ಅಣ್ಣಪ್ಪ ಹೆಗಡೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು.  ಪೌರಕಾರ್ಮಿಕರ ಸಹಕಾರದಿಂದ ಮೃತದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

‘ಹೆಣ್ಣು ಶಿಶುವಿನ ಮೃತದೇಹ ಕೊಳೆತ ನಾರುತ್ತಿತ್ತು. ಮರಣೋತ್ತರ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಲಿದೆ. ತಕ್ಷಣವೇ ಪಾಲಕರ ಕುರಿತು ಮಾಹಿತಿ ಕಲೆಹಾಕಲು ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಹಾಗೂ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಶಿಶುವಿನ ಪಾಲಕರ ಪತ್ತೆ ಕಾರ್ಯ ಮುಂದುವರೆದಿದೆ’ ಎಂದು ಸಿಡಿಪಿಒ ಅಣ್ಣಪ್ಪ ಹೆಗಡೆ ತಿಳಿಸಿದರು.

ಸಿಪಿಐ ಶಶಿಧರ ಜಿ.ಎಂ., ಪಿಎಸ್ಐ ಹನುಮಂತಪ್ಪ ಶಿವಣ್ಣವರ, ಪುರಸಭೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.