ಶಾಲೆಯ ಆವರಣದಲ್ಲಿ ಆಟದ ಮೈದಾನ ರನ್ನಿಂಗ್ ಮತ್ತು ಪುಟ್‌ಪಾತ್ ಟ್ರಾಕ್ ಮಾಡಲಾಗಿದೆ.
ಶತಮಾನೋತ್ಸವ ಇಂದು
ಜ. 4 ರಂದು ಬೆಳಿಗ್ಗೆ 10ಕ್ಕೆ ನಡೆಯುವ ಶಾಲೆಯ ಶತಮಾನೋತ್ಸವ ಸಮಾರಂಭದ ಸಾನ್ನಿಧ್ಯವನ್ನು ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಲಿದ್ದು ಸಂಸದ ಬಸವರಾಜ ಬೊಮ್ಮಾಯಿ ಶಾಲೆಯ ಭೂದಾನಿಗಳ ಪುತ್ರರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಗಣ್ಯರು ಭಾಗವಹಿಸಲಿದ್ದಾರೆ. ಜ. 5 ರಂದು ಸಂಜೆ ನಡೆಯುವ ಗುರುವಂದನೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೋತನಹಳ್ಳಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಮಾರನಬೀಡ ವೇ.ಮೂ ಶಿವಶಂಕ್ರಯ್ಯಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಶ್ರೀನಿವಾಸ ಮಾನೆ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ ಜಾಡರ ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಸಂಶಿ ಭಾಗವಹಿಸಲಿದ್ದಾರೆ.