ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹6.60 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ಯು.ಬಿ.ಬಣಕಾರ

Published 24 ಫೆಬ್ರುವರಿ 2024, 13:12 IST
Last Updated 24 ಫೆಬ್ರುವರಿ 2024, 13:12 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ‘ಸಾಮಾಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ಸರ್ಕಾರದೊಂದಿಗೆ ಸಮೂಹಗಳ ಸಹಭಾಗಿತ್ವ ಜೊತೆಯಾದರೆ ಹೆಚ್ಚಿನ ಅಭಿವೃದ್ಧಿ ಕಾಣಲು ಸಾಧ್ಯ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ರಟ್ಟೀಹಳ್ಳಿ ಪಟ್ಟಣದಲ್ಲಿ ಶನಿವಾರ ನಮ್ಮೂರು-ನಮ್ಮವರು ಸ್ನೇಹಬಳಗ ಹಾಗೂ ಹಿಂದೂ ವೀರಶೈವ ಸಮಾಜದವರ ಸಹಯೋಗದಲ್ಲಿ ರುದ್ರಭೂಮಿಯಲ್ಲಿ ನಿರ್ಮಿಸಿದ ವಿಶ್ರಾಂತಿ ಧಾಮ ಉದ್ಘಾಟಿಸಿ ಮಾತನಾಡಿದರು.

‘ಸ್ಮಶಾನ ಅಭಿವೃದ್ಧಿಯಲ್ಲಿ ಸಾಕಷ್ಟು ಆರ್ಥಿಕ, ದೈಹಿಕ ಶ್ರಮವಹಿಸಿ ಸೇವೆ ಸಲ್ಲಿಸಿದ ನಮ್ಮೂರು-ನಮ್ಮವರು ಸ್ನೇಹ ಬಳಗ ಹಾಗೂ ಊರಿನ ಗಣ್ಯರ ಸೇವೆ ಶ್ಲಾಘನೀಯ. ರಟ್ಟೀಹಳ್ಳಿ ಪಟ್ಟಣದಲ್ಲಿ ₹52 ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾಗುತ್ತಿದೆ. ₹6.60 ಕೋಟಿ ವೆಚ್ಚದಲ್ಲಿ ಮುಜರಾಯಿ ಇಲಾಖೆಯಿಂದ ತಾಲ್ಲೂಕಿನ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದರು.

ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ನಾಗವಂದ ಗ್ರಾಮದ ಹೊರಗಿನಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಎಸ್.ಬಿ.ಗೂಳಪ್ಪನವರ ಅಧ್ಯಕ್ಷತೆ ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಧರ್ಮಸ್ಥಳ ಯೋಜನಾಧಿಕಾರಿ ಮಂಜುನಾಥ, ಆರ್.ಜಿ.ದ್ಯಾವಕ್ಕಳವರ, ವೀರನಗೌಡ ಪ್ಯಾಟೀಗೌಡ್ರ, ವಸಂತ ದ್ಯಾವಕ್ಕಳವರ, ಪಿ.ಡಿ. ಬಸನಗೌಡ್ರ, ರವೀಂದ್ರ ಮುದಿಯಪ್ಪನವರ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT