ಶುಕ್ರವಾರ, ಜುಲೈ 30, 2021
28 °C

ವಿಪತ್ತು ನಿರ್ವಹಣೆಗೆ ಅಧಿಕಾರಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಮುಂಗಾರು ಮಳೆಯಿಂದ ಉಂಟಾಗುವ ಪ್ರಕೃತಿ ವಿಕೋಪ ನಿಭಾಯಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಅಧಿಕಾರಿ ಸಕಾಲಕ್ಕೆ ಸ್ಪಂದಿಸಿ ತುರ್ತು ಕ್ರಮ ಕೈಗೊಳ್ಳಲು ಜಿಲ್ಲೆಯ ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಹಾವೇರಿ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ  ಚೈತ್ರಾ (ಮೊ.9480843036), ಹಾವೇರಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು (ಮೊ.948086110), ಹೆಚ್ಚುವರಿ ನೋಡಲ್ ಅಧಿಕಾರಿಗಳಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ (ಮೊ.9482455663) ನಿಯೋಜಿಸಲಾಗಿದೆ.

ರಾಣೆಬೆನ್ನೂರ ತಾಲ್ಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿ. (ಮೊ.9900977876), ರಾಣೆಬೆನ್ನೂರು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಎಲ್ (ಮೊ.9482155119), ಬ್ಯಾಡಗಿ ತಾಲ್ಲೂಕಿಗೆ ಜಿಲ್ಲಾ ನೋಂದಣಾಧಿಕಾರಿ ಡೊಂಬರ ಮತ್ತೂರ (ಮೊ.9880122099) ನಿಯೋಜಿಸಲಾಗಿದೆ.

ಬ್ಯಾಡಗಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಾಫರ್ ಸುತಾರ (ಮೊ.9480461770) ಹಾಗೂ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲ್ಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಮಖಾನೆ, (ಮೊ.7975552336), ಹಿರೇಕೆರೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಡಾ.ಬಿ.ಆರ್ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವಸಂತಕುಮಾರ ಅವರನ್ನು ನಿಯೋಜಿಸಲಾಗಿದೆ.

ಸವಣೂರ ತಾಲ್ಲೂಕಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗರಾಜ (ಮೊ.9916648339), ಸವಣೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೆಟ್ಟಪ್ಪನವರ (ಮೊ.9480022969) ಹಾಗೂ ಶಿಗ್ಗಾವಿ ತಾಲ್ಲೂಕಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ ಮಠದ (ಮೊ.9886635499), ಶಿಗ್ಗಾಂವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ವಿನಾಯಕ ಜೋಷಿ (ಮೊ.9448826871) ಅವರನ್ನು ನಿಯೋಜಿಸಲಾಗಿದೆ.

ಹಾನಗಲ್ ತಾಲೂಕಿಗೆ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸುಭಾಸಗೌಡ್ರ (ಮೊ.9916565361) ಹಾಗೂ ಹಾನಗಲ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹೆಚ್ಚುವರಿ ನೋಡಲ್ ಅಧಿಕಾರಿಗಳಾಗಿ ಪಶುಪಾಲನೆ ಮತ್ತು ಪಶುವೈದ್ಯ ಸೇವೆಯ ಸಹಾಯಕ ನಿರ್ದೇಶಕ ರಾಜು ಕೂಲೇರ (ಮೊ.7760627272), ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು