ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಈಡಿಸ್ ಸೊಳ್ಳೆಯ ಲಾರ್ವಾಹಾರಿ ಮೀನುಮರಿಗಳ ವಿತರಣೆ

Published 8 ಜೂನ್ 2024, 15:09 IST
Last Updated 8 ಜೂನ್ 2024, 15:09 IST
ಅಕ್ಷರ ಗಾತ್ರ

ಬ್ಯಾಡಗಿ:ತಾಲ್ಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ಡೆಂಗಿ ಜ್ವರ ಹರಡಲು ಕಾರಣವಾಗಿರುವ ಈಡಿಸ್ ಸೊಳ್ಳೆಯ ಲಾರ್ವಾಹಾರಿ ಮೀನಿನ ಮರಿಗಳನ್ನು ಆರೋಗ್ಯ ಇಲಾಖೆಯಿಂದ ಗುರುವಾರ ಮನೆ ಮನೆಗೆ ವಿತರಿಸಲಾಯಿತು.

ಈ ವೇಳೆ ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ ಗುಬ್ಬಿ ಮಾತನಾಡಿ, ‘ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಲಾರ್ವಾಹಾರಿ ಮೀನುಗಳನ್ನು ವಿತರಿಸಲಾಗುತ್ತಿದೆ. ಡೆಂಗಿ ಜ್ವರ ತಡೆಗಟ್ಟಲು ವೈಜ್ಞಾನಿಕ ವಿಧಾನ ಪರಿಣಾಮಕಾರಿಯಾಗಿದ್ದು, ಈ ಮೀನುಗಳು ಈಡಿಸ್ ಸೊಳ್ಳೆಗಳನ್ನು ಮರಿ ಹಂತದಲ್ಲೇ ಭಕ್ಷಿಸಿ ಸೊಳ್ಳೆಗಳು ಪ್ರಮಾಣ ಹೆಚ್ಚು ಉತ್ಪತ್ತಿಯಾಗುವುದನ್ನು ತಡೆಗಟ್ಟುತ್ತವೆ. ಇದರಿಂದ ಸುಲಭವಾಗಿ ಡೆಂಗಿ ತಡೆಗಟ್ಟಬಹುದು’ ಎಂದು ಹೇಳಿದರು.

‘ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಾಗ ಕೂಡಲೆ ರಕ್ತ ಪರೀಕ್ಷೆ ಮಾಡಿಸಬೇಕು. ವಾರಕ್ಕೊಮ್ಮೆ ಶುಷ್ಕ ದಿನ ಆಚರಿಸಬೇಕು. ಪರಿಸರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಘನತ್ಯಾಜ್ಯ ನಿರ್ವಹಿಸಬೇಕು. ನೀರು ನಿಲ್ಲದಂತೆ ನೋಡಿಕೊಳ್ಳುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು’ ಎಂದು ತಿಳಿಸಿದರು.

ಈ ವೇಳೆ ಕೆರವಡಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸಿದ್ದಪ್ಪ ಚೌಟಿ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT