ಬುಧವಾರ, ನವೆಂಬರ್ 25, 2020
19 °C

ಹಾವೇರಿ: ವಲಸೆ ಕುಟುಂಬದ ಮಕ್ಕಳಿಗೆ ಪಠ್ಯ ಪುಸ್ತಕ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ದೇಶದಲ್ಲಿ ಶೇ 40ರಷ್ಟು ಮತ್ತು ರಾಜ್ಯದಲ್ಲಿ ಶೇ 34ರಷ್ಟು ಮಕ್ಕಳಿದ್ದು, ವಿಶ್ವದಲ್ಲಿ ಅತಿಹೆಚ್ಚು ಮಕ್ಕಳನ್ನು ಹೊಂದಿರುವ ದೇಶವೆಂದರೆ ಭಾರತ. ಪ್ರತಿಯೊಂದು ಮಗುವನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಬೆಳೆಸಬೇಕಾಗಿದೆ’ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್. ಮಜೀದ್ ಹೇಳಿದರು. 

ತಾಲ್ಲೂಕಿನ ಕಬ್ಬೂರಿನಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರ-1098 ಹಾವೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಚೈಲ್ಡ್‌ಲೈನ್‌ ಸೇ ದೋಸ್ತಿ ವೀಕ್’ (ಮಕ್ಕಳ ಸ್ನೇಹಿ ಸಪ್ತಾಹ) ಹಾಗೂ ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ದಿನದ ಅಂಗವಾಗಿ ವಲಸೆ ಕುಟುಂಬಗಳ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿ ಅವರು ಮಾತನಾಡಿದರು.

ನ.20 ಅಂತರರಾಷ್ಟ್ರೀಯ ಮಕ್ಕಳ ಹಕ್ಕುಗಳ ದಿನವಾಗಿದೆ. ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಒಡಂಬಡಿಕೆ ಜಾರಿಗೆ ಬಂದು 31 ವರ್ಷಗಳಾದರೂ ಮಕ್ಕಳ ಹಕ್ಕುಗಳನ್ನು ನೀಡುವಲ್ಲಿ ನಾವು ಇನ್ನೂ ಉತ್ತಮವಾದ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.

ದೇಶದಲ್ಲಿ ಪ್ರತಿ ಗಂಟೆಗೆ 4 ಮಕ್ಕಳು ಲೈಂಗಿಕವಾಗಿ ದುರ್ಬಳಕೆಯಾಗುತ್ತಿದ್ದಾರೆ. ದೇಶದಲ್ಲಿ ಮಕ್ಕಳ ಮೇಲಿನ ದೌರ್ಜನ್ಯಗಳು ದಿನನಿತ್ಯ ನಡೆಯುತ್ತಿವೆ. ಮಕ್ಕಳು ಶಾಲೆಗೆ ಬಂದರೆ ಸಾಲದು. ಮಕ್ಕಳಿಗೆ ಪೌಷ್ಟಿಕ ಆಹಾರ, ರಕ್ಷಣೆ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ ಎಂದರು. 

ಹಾವೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕ ಮಂಜುನಾಥ ಪ್ರಾಸ್ತಾವಿಕ ನುಡಿಗಳನ್ನಾಡಿದರು. 

ಶಿಕ್ಷಣ ಸಂಯೋಜಕ ಆರ್.ಎಸ್. ಹಿರೇಮಠ, ಮುಖ್ಯ ಶಿಕ್ಷಕ ಸಿ.ಎಸ್. ಸನದಿ, ಎಸ್.ಡಿ.ಎಂ.ಸಿ. ಸದಸ್ಯ ರುದ್ರಪ್ಪ ಬಾಗರ್ ಪಾಲ್ಗೊಂಡಿದ್ದರು. ಶಿವಾನಂದಪ್ಪ ಗದಿಗೇರ್ ಸ್ವಾಗತಿಸಿ, ಜ್ಯೋತಿ ಆನಿಶೆಟ್ಟರ ವಂದಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು