ಹಾವೇರಿ: ‘ಮನೆ ಕಳೆದು ಕೊಂಡವರಿಗೆ ತಕ್ಷಣ ₹10 ಸಾವಿರ ಪರಿಹಾರ ಪಾವತಿ ನೀಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ ಹಲವರು ಕೆರೆ–ಕಟ್ಟೆಗಳು ಒಡೆದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದರು.

ಕುಮದ್ವತಿ, ವರದಾ ಹಾಗೂ ಧರ್ಮಾ ನದಿ ಪ್ರದೇಶದಲ್ಲಿ ನೀರಿನ ಹರಿವು ಹೆಚ್ಚಾಗಿ ವಿವಿಧ ಗ್ರಾಮಗಳ ಜಮೀನಿಗೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ನೀರು ನುಗ್ಗಿ ಮನೆಗಳು ಕುಸಿದಿವೆ. ಈ ಮನೆಗಳ ಮರು ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಹಾಗೂ ಮನೆಗಳ ಸಮೀಕ್ಷೆ ಕಾರ್ಯ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಕೆರೆಗಳ ದುರಸ್ತಿಗೆ ಕ್ರಮ:ಶಿಗ್ಗಾವಿ ತಾಲ್ಲೂಕು ಕೆರೆಗಳು ಹೆಚ್ಚಾಗಿದ್ದು, ಶ್ಯಾಬಳ, ಶ್ಯಾಡಂಬಿ, ಹುಣಸಿಕಟ್ಟೆ ಕೆರೆಗಳು ತುಂಬಿದ್ದು, ಕೆರೆ ನೀರು ನುಗ್ಗಿ 32 ಮನೆಗಳು ಕುಸಿದಿವೆ. ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರ ಭಾಗದಲ್ಲಿ ತುಂಬಾ ಹಾನಿಯಾಗಿದೆ. ಹಾನಿಯಾದ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯ ಎಲ್ಲ ಕೆರೆಗಳ ದುರಸ್ತಿಗೆ ಕ್ರಮವಹಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬೆಳೆಹಾನಿ ಹಾಗೂ ಮನೆಗಳ ಹಾನಿಗೆ ತುರ್ತು ಪರಿಹಾರ ಒದಗಿಸಲು ಹಾಗೂ ಮನೆಗಳ ಪುನರ್ ನಿರ್ಮಾಣ, ಗ್ರಾಮಗಳ ಸ್ಥಳಾಂತರಕ್ಕೆ ಗ್ರಾಮಸ್ಥರು ಸಚಿವರಿಗೆ ಮನವಿ ಮಾಡಿಕೊಂಡರು. ಪುನರ್ವಸತಿಗೆ ಹಾಗೂ ಪರಿಹಾರ ವಿತರಣೆಗೆ ತುರ್ತು ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಶಿಗ್ಗಾವಿ ತಹಶೀಲ್ದಾರ್ ಮಂಜುನಾಥ ಇದ್ದರು.

‘ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ’

ಹಾವೇರಿ: ಬಿಜೆಪಿ ಭ್ರಷ್ಟ ಪಕ್ಷ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ‘ಭ್ರಷ್ಟಾಚಾರದ ಗಂಗೋತ್ರಿ’ ಎಂದು ಲೇವಡಿ ಮಾಡಿದರು.

ಪ್ರವಾಹದಿಂದ ಹಾನಿಯಾಗಿರುವ ಶಾಬಾಳ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದೊಂದಿಗೆ ಅವರು ಮಾತನಾಡಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗಿಲ್ಲ. ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ದೆಹಲಿಗೆ ತೆರಳುವ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರೇ ಉತ್ತರ ಕೊಡ್ತಾರೆ. ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲಿ ನಾನಿಲ್ಲ. ಈ ಬಗ್ಗೆ ನಾನು ಯಾವುದೇ ಚಿಂತನೆ ನಡೆಸಿಲ್ಲ ಎಂದರು.

ಹಾವೇರಿ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಲ್ಲ. ಬರುವ ವಾರದಲ್ಲಿ ಇನ್ನೂ ಹೆಚ್ಚಿನ ಯೂರಿಯಾ ತರಿಸಲಾಗುವುದು

– ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.