ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಸ್ಪತ್ರೆ: ಮಳೆ ನೀರು ಸೋರಿಕೆ ತಡೆಗಟ್ಟಲು ಶೀಟುಗಳ ಅಳವಡಿಕೆ

Published 9 ಆಗಸ್ಟ್ 2023, 9:06 IST
Last Updated 9 ಆಗಸ್ಟ್ 2023, 9:06 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಮಳೆ ನೀರು ಸೋರಿಕೆ ತಡೆಗಟ್ಟಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದ ಮೇರೆಗೆ, ಆರೋಗ್ಯ ಇಲಾಖೆ ಎಂಜಿನಿಯರ್‌ಗಳು ಕಟ್ಟಡ ಮೇಲ್ಭಾಗದ ಶೀಟುಗಳನ್ನು ಅಳವಡಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 25ರಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮಳೆ ನೀರು ಸೋರಿಕೆಯಿಂದ ಮಕ್ಕಳು, ಗರ್ಭಿಣಿ, ಬಾಣಂತಿಯರು, ರೋಗಿಗಳು ತೀವ್ರ ಪರದಾಡುತ್ತಿದ್ದನ್ನು ಕಂಡು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆರೋಗ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ (ಎಇಇ) ಮಂಜುನಾಥ ನಾಯಕ್‌ ಅವರನ್ನು ಅಮಾನತುಗೊಳಿಸಿದ್ದರು.

ನಂತರ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ, ಶೀಟುಗಳನ್ನು ಅಳವಡಿಸಲು ಸೂಚನೆ ನೀಡಿದ್ದರು. ಹಾವೇರಿ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳಿಂದ 350 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ₹20 ಕೋಟಿ ಮೊತ್ತದ ಕಾಮಗಾರಿಯನ್ನು ಆಸ್ಪತ್ರೆ ಕಟ್ಟಡದ ಮೇಲ್ಭಾಗ ಕೈಗೊಳ್ಳಲಾಗಿತ್ತು. ಇದು ನೀರು ಸೋರಿಕೆಗೆ ಕಾರಣವಾಗಿತ್ತು ಎನ್ನಲಾಗಿದೆ. 

ಜಿಲ್ಲಾಸ್ಪತ್ರೆಯ ಮಕ್ಕಳ ವಾರ್ಡ್‌, ತಾಯಂದಿರ ವಾರ್ಡ್‌ ಸೇರಿದಂತೆ ಮಳೆಯಿಂದ ಸೋರುತ್ತಿದ್ದ ಕೊಠಡಿಗಳ ಮೇಲ್ಭಾಗ ಶೀಟುಗಳನ್ನು ಅಳವಡಿಸಿರುವುದರಿಂದ ನೀರು ಸೋರಿಕೆ ನಿಂತಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT