ಹಾವೇರಿ: ದಿನೇ ದಿನೇ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಎಲ್ಲರೂ ಪ್ರಯತ್ನಿಸಬೇಕಿದೆ. ಸಾರ್ವಜನಿಕರು ವಾಹನಗಳಿಗೆ ಕಲಬೆರಕೆ ಇಂಧನ ಬಳಸಬಾರದು, ಗಿಡ–ಮರಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ವಾಯುಮಾಲಿನ್ಯ ತಡೆಗಟ್ಟಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಅಭಿಪ್ರಾಯಪಟ್ಟರು.

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ 2021ರ ಅಂಗವಾಗಿ ಹಮ್ಮಿಕೊಂಡಿದ್ದ ಮನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಕಚೇರಿ ಆವರಣದಲ್ಲಿ ಹಲವಾರು ಗಿಡಗಳನ್ನು ಬೆಳೆಸಲಾಗಿದೆ. ಹತ್ತು ವರ್ಷಗಳ ಹಿಂದ ನೆಟ್ಟ ಸಸಿಗಳು ಈಗ ಫಲ ಕೊಡುತ್ತಿವೆ. ಕಚೇರಿ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ. ಇದಕ್ಕೆ ಕಚೇರಿ ಸಿಬ್ಬಂದಿಯ ಪರಿಶ್ರಮವೇ ಕಾರಣ. ಎಲ್ಲರೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರಿಗೆ ಉಚಿತವಾಗಿ ಗಿಡಗಳನ್ನು ವಿತರಿಸಲಾಯಿತು. ಕಚೇರಿ ಅಧೀಕ್ಷಕರಾದ ರಮೇಶ ದೊಡ್ಡಮನಿ, ಸತೀಶ ವೈ.ಆರ್., ಶ್ರೀಪಾದ ಬ್ಯಾಳಿ, ವಿನಯಕುಮಾರ ಕೆ.ಸಿ., ಅಕ್ಷಯಕುಮಾರ ಟಿ.ಸಂಕಮ್ಮನವರ, ಮೆಹಬೂಬ್ ಅಲಿ ಹೋಟೆಗಾಳಿ, ಎಂ.ಎಸ್.ವಿನು, ಪ್ರದೀಪ ಚುಕ್ಕಿ, ರುದ್ರೇಶ ಮಡ್ಲಿಮಠ, ಶಕುಂತಲಾ ಹೆಗ್ಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.