ಶುಕ್ರವಾರ, ಡಿಸೆಂಬರ್ 3, 2021
24 °C
ಆರ್‌ಟಿಒ ವಸೀಂಬಾಬಾ ಮುದ್ದೇಬಿಹಾಳ ಮನವಿ

ವಾಹನಕ್ಕೆ ಕಲಬೆರಕೆ ಇಂಧನ ಬಳಸಬೇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ದಿನೇ ದಿನೇ ವಾಯು ಮಾಲಿನ್ಯ ಹೆಚ್ಚುತ್ತಿದ್ದು, ಇದರ ನಿಯಂತ್ರಣಕ್ಕೆ ಎಲ್ಲರೂ ಪ್ರಯತ್ನಿಸಬೇಕಿದೆ. ಸಾರ್ವಜನಿಕರು ವಾಹನಗಳಿಗೆ ಕಲಬೆರಕೆ ಇಂಧನ ಬಳಸಬಾರದು, ಗಿಡ–ಮರಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ವಾಯುಮಾಲಿನ್ಯ ತಡೆಗಟ್ಟಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಅಭಿಪ್ರಾಯಪಟ್ಟರು. 

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ 2021ರ ಅಂಗವಾಗಿ ಹಮ್ಮಿಕೊಂಡಿದ್ದ ಮನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಕಚೇರಿ ಆವರಣದಲ್ಲಿ ಹಲವಾರು ಗಿಡಗಳನ್ನು ಬೆಳೆಸಲಾಗಿದೆ. ಹತ್ತು ವರ್ಷಗಳ ಹಿಂದ ನೆಟ್ಟ ಸಸಿಗಳು ಈಗ ಫಲ ಕೊಡುತ್ತಿವೆ. ಕಚೇರಿ ಆವರಣ ಹಸಿರಿನಿಂದ ಕಂಗೊಳಿಸುತ್ತಿದೆ. ಇದಕ್ಕೆ ಕಚೇರಿ ಸಿಬ್ಬಂದಿಯ ಪರಿಶ್ರಮವೇ ಕಾರಣ. ಎಲ್ಲರೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. 

ಸಾರ್ವಜನಿಕರಿಗೆ ಉಚಿತವಾಗಿ ಗಿಡಗಳನ್ನು ವಿತರಿಸಲಾಯಿತು. ಕಚೇರಿ ಅಧೀಕ್ಷಕರಾದ ರಮೇಶ ದೊಡ್ಡಮನಿ, ಸತೀಶ ವೈ.ಆರ್‌., ಶ್ರೀಪಾದ ಬ್ಯಾಳಿ, ವಿನಯಕುಮಾರ ಕೆ.ಸಿ., ಅಕ್ಷಯಕುಮಾರ ಟಿ.ಸಂಕಮ್ಮನವರ, ಮೆಹಬೂಬ್‌ ಅಲಿ ಹೋಟೆಗಾಳಿ, ಎಂ.ಎಸ್‌.ವಿನು, ಪ್ರದೀಪ ಚುಕ್ಕಿ, ರುದ್ರೇಶ ಮಡ್ಲಿಮಠ, ಶಕುಂತಲಾ ಹೆಗ್ಗೇರಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು