ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಕಲಾತಂಡಗಳ ಮೆರುಗು

Last Updated 6 ಜನವರಿ 2023, 3:45 IST
ಅಕ್ಷರ ಗಾತ್ರ

ಹಾವೇರಿ: ಯಾಲಕ್ಕಿ ಕಂಪಿನ ನಗರಿ, ಸರ್ವ ಧರ್ಮಗಳ ಸಾಮರಸ್ಯದ ಬೀಡು ಹಾವೇರಿಯಲ್ಲಿ ಜ.6 ರಿಂದ ಜ.8 ರವರೆಗೆ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಧರ್ನುಮಾಸದ ಚಳಿಯ ನಡುವೆ,‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ಕನ್ನಡ ಗಂಧರ್ವ ಲೋಕ ಧರೆಗಿಳಿದಂತೆ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.

ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌ ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.

ನಂತರ ಸಚಿವ ಶಿವರಾಮ ಹೆಬ್ಬಾರ್ ಮಾಧ್ಯಮವದರೊಂದಿಗಿ ಮಾತನಾಡಿ, ‘ನ ಭೂತೋ ನ ಭವಿಷ್ಯತಿಃ ಎನ್ನುವ ರೀತಿಯಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಭಾಷೆ ಹಾಗೂ ನಾಡಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ಸರಿಯಾದ ಉತ್ತರ ನೀಡಲಾಗುವುದು. ನಾಡು ನುಡಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯಿಲ್ಲ’ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ‘ಹಾವೇರಿಗೆ ಆಗಮಿಸಿದ ಸಮ್ಮೇಳಾನಧ್ಯಕ್ಷರನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಗಿದೆ. ಸಮ್ಮೇಳನದ ಕಾರ್ಯಗಳು ಸುಗಮವಾಗಿ ಜರುಗಲಿ ಎಂಬ ಉದ್ದೇಶದಿಂದ, ನಿಗದಿತ ಸಮಯಕ್ಕೆ ಸರಿಯಾಗಿ‌ ಧ್ವಜಾರೋಹಣ ನೆಡೆಸಲಾಗಿದೆ. ಸಮ್ಮೇಳನದಲ್ಲಿ ‌ಕನ್ನಡ ನಾಡು ನುಡಿಯ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನೆಡೆಯಲಿವೆ.‌ ಸಮ್ಮೇಳನಕ್ಕೆ ಯಾವುದೇ ಕೊರತೆಯಾಗದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟು ಎಚ್ಚರಿಕೆ‌ ವಹಿಸಿ, ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎನ್ನುವ ಘೋಷಣೆಯನ್ನು ಅರ್ಥಗರ್ಭಿತವಾಗಿ ಜಾರಿಗೆ ತರಲು ಸರ್ಕಾರ ಪ್ರಯತ್ನ ಮಾಡುತ್ತಿದೆ. ಈ ಸಾಹಿತ್ಯ ಸಮ್ಮೇಳನದ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ. ನಾಡು ನುಡಿಯ ವಿಚಾರವಾಗಿ ಭಿನ್ನತೆಗಳನ್ನು ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಸಬೇಕು’ ಎಂದರು‌.

ಪೊಲೀಸ್, ಎನ್.ಸಿ.ಸಿ, ಸೇವದಾಳ, ಸ್ಕೌಟ್ ಮತ್ತು ಗೈಡ್ಸ್ ತಂಡಗಳು ಗೌರವ ವಂದನೆ ಸಲ್ಲಿಸಿದವು. ಹೇಮಂತ್ ಎಸ್.ಕೆ. ಸ್ವಾಗತಿಸಿದರು. ನಾಗರಜ ಇಚ್ಚಂಗಿ ನಿರೂಪಿಸಿದರು. ಎ.ಎಲ್.ಶೇಖಸುರನುಗಿ ವಂದಿಸಿದರು. ಅರುಣ್ ಕಾಳಪ್ಪನವರು ಕಾರ್ಯಕ್ರಮ ನಿರ್ವಹಿಸಿದರು.

ಸಂಸದ ಶಿವಕುಮಾರ್ ಉದಾಸಿ, ಶಾಸಕ ನೇಹರು ಓಲೆಕಾರ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ. ಸಿಇಓ ಮಹಮದ್ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸೇರಿದಂತೆ ಮತ್ತಿತರು ಇದ್ದರು.

ಕನ್ನಡ ಬಾವುಟ ಹಿಡಿದು ಸಾಗಿದ ಮಕ್ಕಳು
ಕನ್ನಡ ಬಾವುಟ ಹಿಡಿದು ಸಾಗಿದ ಮಕ್ಕಳು
ಹಾವೇರಿ ಜಿಲ್ಲೆಯ ಡೊಳ್ಳು ವಾದ್ಯ
ಹಾವೇರಿ ಜಿಲ್ಲೆಯ ಡೊಳ್ಳು ವಾದ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT