ಶನಿವಾರ, ಜನವರಿ 23, 2021
19 °C

‘ಕನಕದಾಸರು ಅನುಭಾವಿ ಸಾಹಿತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಣೆಬೆನ್ನೂರು: ಕನಕದಾಸರು ಒಂದು ವರ್ಗದ ಪ್ರತಿನಿಧಿಯಲ್ಲ. ನಮ್ಮ ಸಂಸ್ಕೃತಿಯ ಪ್ರತಿನಿಧಿ, ಅಂತರಂಗದ ಮಾರ್ಗದರ್ಶಿ. ಒಬ್ಬ ಅನುಭಾವಿ ಸಾಹಿತಿಯಾಗಿ ಅವರ ಸಾಹಿತ್ಯಕ ಕೊಡುಗೆ ಅನನ್ಯವಾದುದು ಎಂದು ತಹಶೀಲ್ದಾರ್ ಬಸನಗೌಡ ಕೋಟೂರ ಹೇಳಿದರು.

ನಗರದ ಮಿನಿವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ದಾಸ ಶ್ರೇಷ್ಠ ಕನಕದಾಸರ 533ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರೊ.ದೊಡ್ಡಬಿಲ್ಲಾ ಅವರು ಕನಕದಾಸರ ಕುರಿತು ಉಪನ್ಯಾಸ ನೀಡಿದರು. ಉಪ ತಹಶೀಲ್ದಾರ ಮಂಜುನಾಥ ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎನ್‌. ಗುರುಪ್ರಸಾದ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎ.ಬಿ. ಚಂದ್ರಶೇಖರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಹನುಮಂತಪ್ಪ ದೇವರಗುಡ್ಡ, ಕೃಷ್ಣಪ್ಪ ಕಂಬಳಿ, ವಕೀಲ ಮೃತ್ಯುಂಜಯ ಗುದಿಗೇರ, ಕೊಂಡಜ್ಜಿ, ರವೀಂದ್ರಗೌಡ ಪಾಟೀಲ, ಹನುಮಂತಪ್ಪ ಕಬ್ಬಾರ, ನಗರಸಭಾ ಸದಸ್ಯ ಸಿದ್ದಪ್ಪ ಬಾಗಲವರ, ಹುಚ್ಚಪ್ಪ ಮೇಡ್ಲೇರಿ, ರತ್ನವ್ವ ಪೂಜಾರ, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಾಡದ, ಸುಭಾಸ ಕುರುಬರ, ಎಂ.ಡಿ. ದ್ಯಾಮಣ್ಣನವರ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.