ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಟ್ಟೀಹಳ್ಳಿ| ₹35 ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿ

Published 27 ಜೂನ್ 2023, 14:11 IST
Last Updated 27 ಜೂನ್ 2023, 14:11 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಪಟ್ಟಣದ ಮಳಗಿ ರಸ್ತೆಯಲ್ಲಿ ಪ್ರಗತಿಯಲ್ಲಿರುವ ಚರಂಡಿ ಕಾಮಗಾರಿಯನ್ನು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ರಾಜಶೇಖರ ಚೌಗಲಾ ಮಂಗಳವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮಳಗಿ ರಸ್ತೆಯಲ್ಲಿನ ಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ. 2022-23ನೇ ಸಾಲಿನ ನಗರೋತ್ಥಾನ ಹಂತ-4 ಯೋಜನೆಯಡಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಮಳಗಿ ರಸ್ತೆಯ ಶಂಕರ ಅಂಗಡಿ ಇವರ ಮನೆಯಿಂದ ಚಿಕ್ಕಪ್ಪ ಶೆಟ್ರ ಇವರ ತೋಟದ ಮನೆಯವರೆಗೆ ಆರ್.ಸಿ.ಸಿ. ಚರಂಡಿ ನಿರ್ಮಾಣ ಹಾಗೂ ಬೂದು ನೀರು ಸಂಸ್ಕರಣಾ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

280 ಮೀಟರ ಉದ್ದ, 4 ಪೂಟ್ ಎತ್ತರ ₹35 ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಈ ವೇಳೆ ಪಟ್ಟಣ ಪಂಚಾಯ್ತಿ ಸಿಬ್ಬಂದಿ ಪರಮೇಶಪ್ಪ ಕಟ್ಟೇಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT