ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರಿ ಸ್ವ್ಯಾಬ್‌ ಸಂಗ್ರಹ ವಾಹನಕ್ಕೆ ಚಾಲನೆ

Last Updated 29 ಮೇ 2020, 15:36 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ರೂಪಿಸಲಾದ ಕೋವಿಡ್-19 ಮೊಬೈಲ್ ಸ್ವ್ಯಾಬ್‌ ಕಲೆಕನ್ಸ್ ವಾಹನಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಚಾಲನೆ ನೀಡಿದರು.

ಗ್ರಾಮಗಳಿಗೆ ತೆರಳಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳನ್ನು ಸ್ಥಳೀಯವಾಗಿ ಸಂಗ್ರಹಿಸಲು ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‍ವೊಂದನ್ನು ಪ್ರಯೋಗಾಲಯವಾಗಿ ಬದಲಾಯಿಸಿ, ಒಳಗೆ ಮಾದರಿ ಸಂಗ್ರಹದ ಉಪಕರಣಗಳನ್ನು ಅಳವಡಿಸಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿದ್ದರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT