ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಆರ್‌ಎಫ್‌ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

Last Updated 6 ಡಿಸೆಂಬರ್ 2021, 12:33 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಶ್ರಯದಲ್ಲಿ ಡಿ.21ರವರೆಗೆ ಜಿಲ್ಲೆಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್‌) ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಚಾಲನೆ ನೀಡಿದ ಅವರು, ಅತಿವೃಷ್ಟಿ ಪ್ರವಾಹ, ಸುನಾಮಿ ಅಂತಹ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಜಿಲ್ಲೆಯ ತಾಲೂಕುಗಳಲ್ಲಿ ಎನ್.ಡಿ.ಆರ್.ಎಫ್. ತಂಡ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಮಾತನಾಡಿ, ‘ಜಿಲ್ಲೆಯ ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು, ರಟ್ಟಿಹಳ್ಳಿ, ಹಾನಗಲ್, ಶಿಗ್ಗಾವಿ ಹಾಗೂ ಸವಣೂರ ತಾಲ್ಲೂಕಿನಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಡಿ.21ರಂದು ಸವಣೂರ ತಾಲ್ಲೂಕಿನಲ್ಲಿ ಕಾರ್ಯಾಗಾರ ಮುಕ್ತಾಯಗೊಳ್ಳಲಿದೆ. ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಎನ್.ಡಿ.ಆರ್.ಎಫ್ ತಂಡದ ಇನ್‌ಸ್ಪೆಕ್ಟರ್‌ ವೇಲೂರು ರಮೇಶ ಮಾತನಾಡಿ, ‘ಸಮುದಾಯದಲ್ಲಿ ವಿವಿಧ ಅವಘಡಗಳು ಸಂಭವಿಸಿದಾಗ ಪ್ರಥಮ ಹಂತದಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಆಂಧ್ರಪ್ರದೇಶದ ವಿಜಯವಾಡಾ 10ನೇ ಬಟಾಲಿಯನ್‌ ಎನ್.ಡಿ.ಆರ್.ಎಫ್ ತಂಡದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಶಾಲೆ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ಬಹುಮಹಡಿ ಕಟ್ಟಡಗಳಲ್ಲಿ ಅವಘಡಗಳು ಸಂಭವಿಸಿದಾಗ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಸ್ಥಳೀಯವಾಗಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಪ್ರವಾಹದಿಂದ ದಡ ಸೇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಉಪವಿಭಾಗಾಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ, ಶಿವಾನಂದ ಉಳ್ಳಾಗಡ್ಡಿ, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT