ಹಾವೇರಿ: ‘ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ. ಮೂರು ದಿನಗಳ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹ ಹಾಗೂ ಸಂತೋಷದಿಂದ ಭಾಗವಹಿಸಿ ಎಂದು ಶುಭ ಕೋರಿದರು.

ಆಕರ್ಷಕ ಪಥಸಂಚಲನ:

ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ರಾಣೆಬೆನ್ನೂರು, ಶಿಗ್ಗಾವಿ ಉಪವಿಭಾಗಗಳ ತಂಡ ಹಾಗೂ ಮಹಿಳಾ ಪೊಲೀಸ್ ಕ್ರೀಡಾ ತಂಡಗಳು ಕೇಸರಿ, ಕೆಂಪು, ಹಳದಿ, ಹಸಿರು ಹಾಗೂ ಆಕಾಶ ನೀಲಿ ಬಣ್ಣದ ಟೀ ಶರ್ಟ್ ಧರಿಸಿ ಪಥಸಂಚಲನ ನಡೆಸಿದರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವೆಂಕಟರಾಜು ನಾಯಕ್, ನಾಗರಿಕ ಪೊಲೀಸ್ ಉಪ ವಿಭಾಗದ ಪ್ರವೀಣಕುಮಾರ, ರಾಣೇಬೆನ್ನೂರ ಉಪವಿಭಾಗದಿಂದ ಪಿ.ಎಸ್.ಐ.ಬಾಳಪ್ಪ , ಮಹಿಳಾ ಪೊಲೀಸ್‍ನ ಸುಜಾತಾ ಪಾಟೀಲ, ಶಿಗ್ಗಾವಿ ಉಪ ವಿಭಾಗದ ರಘು ನಾಯಕ ಅವರ ನೇತೃತ್ವದಲ್ಲಿ ನಡೆದ ಪಥಸಂಚಲನ ಅತ್ಯಂತ ಆಕರ್ಷಕವಾಗಿತ್ತು. ಶಂಕರಗೌಡ ಪಾಟೀಲ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.

ಕ್ರೀಡಾಜ್ಯೋತಿ:

ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಬೆಳಗಿಸಿದರು. ಕಳೆದ ಆರು ವರ್ಷಗಳಿಂದ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪುರಸ್ಕೃತ ಪೊಲೀಸ್ ಕ್ರೀಡಾಪಟು ಸಂತೋಷ ನಾಯಕ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.

ಉಪವಿಭಾಗಾಧಿಕಾರಿ ಶಿವಾನಂದ ಉಳ್ಳೆಗಡ್ಡಿ ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.