ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸಂಚಾರಿ ಆಕ್ಸಿಜನ್ ಬಸ್‍ಗಳಿಗೆ ಚಾಲನೆ

Last Updated 21 ಮೇ 2021, 16:31 IST
ಅಕ್ಷರ ಗಾತ್ರ

ಹಾವೇರಿ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಎರಡು ಆಕ್ಸಿಜನ್ ಬಸ್‌ಗಳ ಸೇವೆಗೆ ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ ಎರಡು ಬಸ್‍ಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿದ ಬಸ್‍ಗಳಿಗೆ ಚಾಲನೆ ನೀಡಿದರು. ಈ ಬಸ್‍ಗಳಲ್ಲಿ ತಲಾ ನಾಲ್ಕು ಕಾನ್ಸೆಂಟ್ರೇಟರ್, ಸಿಲಿಂಡರ್‌ ವ್ಯವಸ್ಥೆ ಮಾಡಲಾಗಿದೆ. ಒಂದು ವಾಹನ ಹಾವೇರಿ ಜಿಲ್ಲಾ ಆಸ್ಪತ್ರೆ ಹಾಗೂ ಇನ್ನೊಂದು ರಾಣೆಬೆನ್ನೂರ ಆಸ್ಪತ್ರೆಯಲ್ಲಿ ಲಭ್ಯವಿರಲಿದೆ. ಆಕ್ಸಿಜನ್ ಅಗತ್ಯ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಆಧಾರ್ ಕಾರ್ಡ್ ಹಾಗೂ ಪಾಸಿಟಿವ್ ವರದಿ ಇದ್ದರೆ ಈ ಬಸ್ ಸೇವೆ ಪಡೆಯಬಹುದು.

ಜಿಲ್ಲಾ ಆಸ್ಪತ್ರೆ ಹಾಸಿಗೆ ವ್ಯವಸ್ಥೆ ಪರಿಶೀಲನೆ ನಡೆಸಿದರು. ಕೋವಿಡ್ ವಾರ್ಡ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಬಗ್ಗೆ ಖದ್ದು ಪರಿಶೀಲನೆ ನಡೆಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ತಜ್ಞ ವೈದ್ಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಪೌರಾಡಳಿತ ಸಚಿವ ಭೈರತಿ ಬಸವರಾಜ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ ಇದ್ದರು.

ಕೋವಿಡ್ ಆಕ್ಸಿಜನ್ ಬೈಪ್ಯಾಕ್ ಹಸ್ತಾಂತರ

ಹಾವೇರಿ ಜಿಲ್ಲೆಗೆ ಹೊಸದಾಗಿ 40 ಕೋವಿಡ್ ಆಕ್ಸಿಜನ್ ಬೈಪ್ಯಾಕ್ ಮಿಷನ್ ಪೂರೈಕೆಯಾಗಿದ್ದು, ಶುಕ್ರವಾರ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಸಚಿವ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಪರಿಶೀಲನೆ ಸಭೆಯ ನಂತರ ಮಾತನಾಡಿ, ಜಿಲ್ಲಾ ಆಸ್ಪತ್ರೆಗೆ 10 ಆಕ್ಸಿಜನ್‌ ಬೈಪ್ಯಾಕ್‌ ಹಾಗೂ ಉಳಿದ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ಐದರಂತೆ ನೀಡಲು ಸೂಚನೆ ನೀಡಿದರು. ಆಕ್ಸಿಜನ್ ಬೈಪ್ಯಾಕ್ ರೋಗಿಗಳಿಗೆ ತುರ್ತು ಆಕ್ಸಿಜನ್ ಪೂರೈಕೆಗೆ ನೆರವಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT